News Karnataka Kannada
Sunday, May 05 2024
ಕರ್ನಾಟಕ

ಕೆಜಿಎಫ್‌ ನಲ್ಲಿ ಕೈಗಾರಿಕಾ ನಗರ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಮನವಿ

Murgesh Prahlad
Photo Credit :

ಬೆಂಗಳೂರು ; ಕೋಲಾರ ಜಿಲ್ಲೆಯ ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಇಂಡಸ್ಟ್ರಿಯಲ್ ಟೌನ್‍ಶಿಪ್ ಪ್ರಾರಂಭಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರವು ಕೇಂದ್ರವನ್ನು ಕೋರಿದೆ.
ಈ ಸಂಬಂಧ ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿಯವರು, ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಾಣದ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಗೆ ಬರುವ ಸುಮಾರು 3,212 ಎಕರೆ ಪ್ರದೇಶದಲ್ಲಿ ಕೇಂದ್ರ ಸರ್ಕಾರವು ಡ್ರೋಣ್ ಮೂಲಕ ಸಮೀಕ್ಷೆ ನಡೆಸಿದ್ದು, ಇಲ್ಲಿ ಗಣಿಗಾರಿಕೆ ನಡೆಸಲು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.ಈ ಹಿನ್ನೆಲೆಯಲ್ಲಿ ಬಳಕೆಯಾಗದೆ ಉಳಿದಿರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಸಚಿವರಿಗೆ ವಸ್ತುಸ್ಥಿತಿಯನ್ನು ನಿರಾಣಿ ಅವರು ವಿವರಿಸಿದರು. ಟೌನ್‍ಶಿಪ್ ನಿರ್ಮಾಣವಾದರೆ ಈ ಭಾಗದಲ್ಲಿ ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಅನುಕೂಲವಾಗುತ್ತದೆ. ಅಲ್ಲದೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕೆಜಿಎಫ್ ನಗರವು ರಾಜಧಾನಿ ಬೆಂಗಳೂರಿನಿಂದ ಸುಮಾರು 100 ಕಿ.ಮೀ ವ್ಯಾಪ್ತಿಯಲ್ಲಿದ್ದು, ವಿಶ್ವದರ್ಜೆಯ ರಾಷ್ಟ್ರೀಯ ಹೆದ್ದಾರಿಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅತ್ಯುತ್ತಮ ರೈಲ್ವೆ ಸಂಪರ್ಕ ಹೊಂದಿದೆ. ಅಲ್ಲದೆ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಕೂಡ ಇಲ್ಲಿಯೇ ಹಾದು ಹೋಗುವುದರಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಗಲಿದೆ. ಟೌನ್‍ಶಿಪ್ ನಿರ್ಮಾಣ ಮಾಡಲು ಯೋಗ್ಯವಾಗಿರುವುದರಿಂದ ನಮ್ಮ ಮನವಿಯನ್ನು ಪರಿಗಣಿಸಬೇಕೆಂದು ಕೋರಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು