News Karnataka Kannada
Friday, May 10 2024
ಕರ್ನಾಟಕ

ಕೊಡಗಿನಲ್ಲಿ ಕೋವಿಡ್ ಅರಿವು ಕಾರ್ಯಕ್ರಮ

Photo Credit :

ಕೊಡಗಿನಲ್ಲಿ ಕೋವಿಡ್ ಅರಿವು ಕಾರ್ಯಕ್ರಮ

ಮಡಿಕೇರಿ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಿಸುವ ಸಲುವಾಗಿ ಜಿಲ್ಲಾಡಳಿತ, ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಲವಾರು ಎಚ್ಚರಿಕೆಯ ಕ್ರಮ ಅನುಸರಿಸುತ್ತಿದೆ.

ಈ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ ಸಂಬಂಧ ಕಟ್ಟುನಿಟ್ಟಿನ ಕ್ರಮಗಳನ್ನೂ ಸಹ ಅನುಸರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್-19 ಸಂಬಂಧ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ನಗರ ಪ್ರದೇಶದಲ್ಲಿ ಜನಸಂದಣಿ ಇರುವ ಸ್ಥಳಗಳಲ್ಲಿ ಕೋವಿಡ್-19 ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ವೈಯಕ್ತಿಕ ಶುಚಿತ್ವ ಪಾಲನೆ, ಸರಿಯಾದ ಕ್ರಮದಲ್ಲಿ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆಗೆ ಸಂಬಂಧಿಸಿದಂತೆ ಜನರಲ್ಲಿ ಪ್ರತಿನಿತ್ಯ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ.

ಇದರೊಂದಿಗೆ ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮುಂತಾದ ಸ್ಥಳಗಳಲ್ಲಿಯೂ ಸಹ ಜನಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಗ್ರಾಮ ಪ್ರದೇಶಗಳಲ್ಲಿಯೂ ಸಹ ಅರಿವು ಕಾರ್ಯಕ್ರಮಗಳು ನಡೆಯುತ್ತಿದ್ದು, ಕೋವಿಡ್ ಸಂಬಂಧ ಎಚ್ಚರಿಕೆಯುಳ್ಳ ಕರಪತ್ರ, ಬ್ಯಾನರ್ ಅಳವಡಿಸುವುದು, ಮುಖ್ಯಮಂತ್ರಿ ಅವರ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವುದು ಮುಂತಾದ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇದರೊಂದಿಗೆ ಪ್ರತಿದಿನದ ಐಇಸಿ ಕಾರ್ಯಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗುತ್ತಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ.

ವಿರಾಜಪೇಟೆ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ತಿತಿಮತಿಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಅರಿವು ಮೂಡಿಸಲಾಯಿತು. ಸೋಮವಾರಪೇಟೆ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸುಂಟಿಕೊಪ್ಪದ ಕಂಬಿಬಾಣೆ ಉಪ ಕೇಂದ್ರದಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಅರಿವು ಮೂಡಿಸಲಾಯಿತು.

ಸೋಮವಾರಪೇಟೆ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಡ್ಲಿಪೇಟೆಯಲ್ಲಿ ಆರೋಗ್ಯ ಕೇಂದ್ರದ ಸಿಬ್ಬಂಧಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು.

ಮಡಿಕೇರಿ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಅರಿವು ಮೂಡಿಸಲಾಯಿತು. ಮಡಿಕೇರಿ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗಮಂಡಲದಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಅರಿವು ಮೂಡಿಸಲಾಯಿತು. ಜಿಲ್ಲಾ ನ್ಯಾಯಾಲಯ ಮಡಿಕೇರಿ, ಇಲ್ಲಿ ಕೋವಿಡ್-19 ಜನಾಂದೋಲನದ ಪ್ರತಿಜ್ಞಾ ಸ್ವೀಕಾರ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ದೇವರಾಜ್ ಹೆಚ್.ಜಿ ಇವರು ನಡೆಸಿದರು. ವಿರಾಜಪೇಟೆ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ತಿತಿಮತಿ, ಮಾಲ್ದಾರೆ ಮತ್ತು ಬಾಳೆಲೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು