News Karnataka Kannada
Monday, April 29 2024
ಕರ್ನಾಟಕ

ಕೊಡಗಿನಲ್ಲಿ ಕೋವಿಡ್: ಸಕ್ರಿಯ ಪ್ರಕರಣಗಳ ಸಂಖ್ಯೆ 111

Photo Credit :

ಕೊಡಗಿನಲ್ಲಿ ಕೋವಿಡ್: ಸಕ್ರಿಯ ಪ್ರಕರಣಗಳ ಸಂಖ್ಯೆ 111

ಮಡಿಕೇರಿ: ಜಿಲ್ಲೆಯಲ್ಲಿ ಬುಧವಾರ 13 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5208 ಆಗಿದ್ದು, 5027 ಮಂದಿ ಗುಣಮುಖರಾಗಿದ್ದಾರೆ.

111  ಸಕ್ರಿಯ ಪ್ರಕರಣಗಳಿದ್ದು, 70 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 104 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್  ಕಣ್ಮಣಿ ಜಾಯ್ ತಿಳಿಸಿದ್ದಾರೆ.

9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ.

ಈ ಪೈಕಿ 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು  ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು