News Karnataka Kannada
Sunday, May 19 2024
ಕರ್ನಾಟಕ

ಕೊಡಗಿನಲ್ಲಿ ಕೋವಿಡ್: ಸೋಂಕಿತರ ಸಂಖ್ಯೆ 4613ಕ್ಕೆ ಏರಿಕೆ

Photo Credit :

ಕೊಡಗಿನಲ್ಲಿ ಕೋವಿಡ್: ಸೋಂಕಿತರ ಸಂಖ್ಯೆ 4613ಕ್ಕೆ ಏರಿಕೆ

ಮಡಿಕೇರಿ: ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 47 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಪ್ರಕರಣಗಳ ಸಂಖ್ಯೆ 4613 ಆಗಿದ್ದು, 4029 ಮಂದಿ ಗುಣಮುಖರಾಗಿದ್ದಾರೆ. 520 ಸಕ್ರಿಯ ಪ್ರಕರಣಗಳಿದ್ದು, 64 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 329 ಆಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

 40 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 07 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 27 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 23 ಆರ್.ಟಿ.ಪಿ.ಸಿ.ಆರ್ ಮತ್ತು 04 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 13 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 12 ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಹೊರ ಜಿಲ್ಲೆಯವರ ಪೈಕಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 2 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು