ಮಡಿಕೇರಿ: ಜಿಲ್ಲೆಯಲ್ಲಿ ಸೋಮವಾರ 83 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4491 ಆಗಿದ್ದು, 3694 ಮಂದಿ ಗುಣಮುಖರಾಗಿದ್ದಾರೆ. 736 ಸಕ್ರಿಯ ಪ್ರಕರಣಗಳಿದ್ದು, 61 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 447 ಆಗಿದೆ ಎಂದು ಮಾಹಿತಿ ನೀಡಿದ್ದಾರೆ.
83 ಪ್ರಕರಣಗಳು ಆರ್ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 27 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 27 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 45 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 45 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಹೊರ ಜಿಲ್ಲೆಯವರ ಪೈಕಿ 1 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.