ಬೆಂಗಳೂರು : ಸೋಂಕು ಕಡಿಮೆಯಾಗದ ಹಿನ್ನಲೆ ರಾಜ್ಯದೆಲ್ಲೆಡೆ ಲಾಕ್ಡೌನ್ ತೆರವು ಮಾಡಿದರೂ ಕೊಡಗು ಜಿಲ್ಲೆಯಲ್ಲಿ ಮಾತ್ರ ನಿರ್ಬಂಧ ಮುಂದುವರೆಸಲಾಗಿತ್ತು. ಪ್ರವಾಸೋದ್ಯಮವೇ ಮೂಲ ಆದಾಯವಾಗಿರುವ ಕೊಡಗಿನಲ್ಲಿ ಲಾಕ್ಡೌನ್ನಿಂದಾಗಿ ಸಾಕಷ್ಟು ನಷ್ಟ ಉಂಟಾಗಿದೆ. ಅಲ್ಲದೇ, ಜನರು ಕೂಡ ಉದ್ಯೋಗ, ಆದಾಯವಿಲ್ಲದೇ ಕಂಗೆಟ್ಟಿದ್ದಾರೆ. ಈ ಹಿನ್ನಲೆ ಇಂದಿನಿಂದ ಕೊಡಗಿನಲ್ಲಿ ಹೇರಿದ್ದು ನಿರ್ಬಂಧ ತೆರೆಯಲಾಗಿದ್ದು, ಅನ್ಲಾಕ್ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಕೊಡಗು ಪ್ರವಾಸ ಕೈಗೊಂಡಿದ್ದ ಸಚಿವರಿಗೆ ಈ ಕುರಿತು ಸಾಕಷ್ಟು ಮನವಿಗಳು ಬಂದ ಹಿನ್ನಲೆ ಈ ಕ್ರಮಕ್ಕೆ ಮುಂದಾಗಲಾಗದೆ. ಆದರೆ, ಈ ವೇಳೆ ಕೊರೋನಾ ನಿಯಮವಾಳಿಗಳನ್ನು ಪಾಲಿಸುವುದು ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ ಹಲವಾರು ವಿಷಯಗಳ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿರುವ 4 ಪ್ರಾದೇಶಿಕ ಆಯುಕ್ತರ ಕಚೇರಿ ಮುಚ್ಚಲು ನಿರ್ಧಾರ ಮಾಡಲಾಗಿದೆ. ಕಂದಾಯ ಇಲಾಖೆ ಪ್ರಾದೇಶಿಕ ಆಯುಕ್ತರ ಕಚೇರಿಗಳ ಬದಲಾಗಿ, ರಾಜ್ಯದಲ್ಲಿನ್ನು ಒಂದೇ ಪ್ರಾದೇಶಿಕ ಆಯುಕ್ತರ ಕಚೇರಿ ಇರಲಿದೆ. ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿ ಗಳಿವೆ. ಐನ್ನೂರು ಜನ ಕೆಲಸ ಮಾಡುತ್ತಿದ್ದಾರೆ. ಕಚೇರಿಗೆ ಬಂದಿರುವ ಅಪೀಲುಗಳು ಕೇವಲ 200. ಈ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಇದರಿಂದ ಬಹಳಷ್ಟು ಹಣ ಉಳಿತಾಯ ಆಗುತ್ತದೆ. ಒಂದು ಪ್ರಾದೇಶಿಕ ಆಯುಕ್ತರ ಕಚೇರಿ ಮಾಡಿ ಒಬ್ಬರನ್ನು ಆಯುಕ್ತರನ್ನಾಗಿ ಮಾಡುತ್ತೇವೆ. ಅಲ್ಲಿನ ಸಿಬ್ಬಂದಿಯನ್ನು ಡಿಸಿ ಆಫೀಸ್ ಗೆ ಶಿಫ್ಟ್ ಮಾಡುತ್ತೇವೆ ಎಂದರು