News Karnataka Kannada
Friday, May 10 2024
ಕರ್ನಾಟಕ

ಕೊಡಗು ಜಿಲ್ಲಾ ಕೋವಿಡ್ ಆಸ್ಪತ್ರೆ : ಆಕ್ಸಿಜನ್ ಟ್ಯಾಂಕ್ ಕಾರ್ಯಾರಂಭ

Photo Credit :

ಕೊಡಗು ಜಿಲ್ಲಾ ಕೋವಿಡ್ ಆಸ್ಪತ್ರೆ : ಆಕ್ಸಿಜನ್ ಟ್ಯಾಂಕ್ ಕಾರ್ಯಾರಂಭ

ಮಡಿಕೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗಿರುವ 13 ಸಾವಿರ ಲೀಟರ್ ಸಾಮರ್ಥ್ಯದ ಆಮ್ಲಜನಕ(ಆಕ್ಸಿಜನ್) ಟ್ಯಾಂಕ್ ಮಂಗಳವಾರದಿಂದ ಕಾರ್ಯ ಆರಂಭವಾಗಿದೆ.

ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ವಿವರ ಇಂತಿದೆ: ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸಂಗ್ರಹ ಸಾಮಥ್ರ್ಯ 13 ಸಾವಿರ ಲೀಟರ್ ಆಗಿದೆ.  ಹೆಚ್ಚಿನ ಕೋವಿಡ್ ಪ್ರಕರಣಗಳಿರುವ ಸಮಯದಲ್ಲಿ ಈ ಲಿಕ್ವಿಡ್ ಆಕ್ಸಿಜನ್ ಸ್ಥಾವರದಲ್ಲಿ 15 ದಿನಗಳವರೆಗೆ ಆಮ್ಲಜನಕ ಸಂಗ್ರಹ ಇರುತ್ತದೆ.

ಕೋವಿಡ್ ಅಲ್ಲದ ಸಮಯಗಳಲ್ಲಿ 2-3 ತಿಂಗಳು ಆಮ್ಲಜನಕ ಸಂಗ್ರಹ ಇರುತ್ತದೆ. ಮುಂದಿನ ದಿನಗಳಲ್ಲಿ ಕೋವಿಡ್ ಆಸ್ಪತ್ರೆ ಬ್ಲಾಕ್‍ನಲ್ಲಿ ಒಂದು ಬಾರಿ ಸಂಗ್ರಹವಾದ ಲಿಕ್ವಿಡ್ ಆಕ್ಸಿಜನ್‍ನ್ನು 300 ಆಕ್ಸಿಜನ್ ಹಾಸಿಗೆಗಳಿಗೆ ನಿರಂತರವಾಗಿ 15 ದಿನಗಳ ಕಾಲ ಪೂರೈಕೆ ಮಾಡಬಹುದಾಗಿದೆ.

ಆಸ್ಪತ್ರೆಯಲ್ಲಿನ ಬಳಕೆಗೆ ಅನುಗುಣವಾಗಿ ಮತ್ತು ಅಗತ್ಯವಿದ್ದಾಗ ಅದನ್ನು ಪುನಃ ತುಂಬಿಸಲಾಗುತ್ತದೆ. ಪ್ರವಾಹ ಪರಿಸ್ಥಿತಿ ಅಥವಾ ಭೂಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದರೂ ಸಹ ಆಸ್ಪತ್ರೆಯಲ್ಲಿ ಆಮ್ಲಜನಕದ ಉತ್ತಮ ಸಂಗ್ರಹವಿರುತ್ತದೆ. ಆಸ್ಪತ್ರೆಯಲ್ಲಿ ಅವಶ್ಯವಿರುವಷ್ಟು ಆಮ್ಲಜನಕದ ಸಂಗ್ರಹ ಇರುವುದರಿಂದ ಕೊಡಗು ಜಿಲ್ಲೆಯ ಜನರಿಗೆ ಅಗತ್ಯ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು