Categories: ಕರ್ನಾಟಕ

ಕೊರೊನಾ ಮುಕ್ತವಾಗಿ ಮುಂದುವರೆದಿರುವ ಚಾಮರಾಜನಗರ ಜಿಲ್ಲೆಗೆ ಕೇಂದ್ರ ಆರೋಗ್ಯ ಸಚಿವರಿಂದ ಪ್ರಶಂಸೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯು ಕೊರೊನಾ ಮುಕ್ತವಾಗಿ ಮುಂದುವರೆಯುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವರಾದ ಡಾ. ಹರ್ಷವರ್ಧನ್ ಅವರು ಜಿಲ್ಲಾಧಿಕಾರಿಯವರಾದ ಡಾ. ಎಂ.ಆರ್. ರವಿ ಅವರಿಗೆ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ರೆಡ್‍ಕ್ರಾಸ್ ವತಿಯಿಂದ ವಿಶ್ವ ಪರಿಸರ ದಿನ ಅಂಗವಾಗಿ ಪೊಲೀಸ್ ಉಪ ಅಧೀಕ್ಷರ ಕಚೇರಿ ಮುಂಭಾಗದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಅವರಣದಲ್ಲಿ ಗಿಡ ನೆಡುವ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳು ದೂರವಾಣಿ ಕರೆ ಸಂಬಂಧ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೇಳೆ ಈ ವಿಷಯ ತಿಳಿಸಿದರು.

ಗುರುವಾರ ಸಂಜೆ ಕೇಂದ್ರ ಆರೋಗ್ಯ ಸಚಿವರು ದೂರವಾಣಿ ಮೂಲಕ ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ. ಈ ಮೂಲಕ ಹಸಿರು ವಲಯವನ್ನಾಗಿ ಕಾಪಾಡಿಕೊಂಡಿರುವ ಬಗ್ಗೆ ಜಿಲ್ಲೆಯ ಜನತೆ, ಅಧಿಕಾರಿಗಳು ಹಾಗೂ ನನಗೆ ಶುಭ ಹಾರೈಸಿದ್ದಾರೆ ಎಂದರು.

ಕೇಂದ್ರ ಆರೋಗ್ಯ ಸಚಿವರು ದೂರವಾಣಿ ಕರೆ ಮಾಡಿರುವುದು ನನಗೆ ಆಶ್ಚರ್ಯ ಹಾಗೂ ಸಂತಸ ಉಂಟುಮಾಡಿದೆ. ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸುವ ಕಾರ್ಯವು ಮುಂದುವರೆಯಲಿ ಎಂದು ಸಚಿವರು ಶ್ಲಾಘಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ ಅವರು ತಿಳಿಸಿದರು.

ಜಿಲ್ಲೆಯು ಕೊರೊನಾ ಮುಕ್ತವಾಗಿ ಮುಂದುವರೆಯಲು ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಒಂದು ತಂಡವಾಗಿ ಸತತವಾಗಿ ಕೆಲಸ ನಿರ್ವಹಿಸಿದ್ದಾರೆ. ಜನಪ್ರತಿನಿಧಿಗಳು ಸಹ ಪ್ರೋತ್ಸಾಹ, ಸಹಕಾರ ನೀಡುವ ಮೂಲಕ ಜಿಲ್ಲೆ ಕೋವಿಡ್ ಮುಕ್ತವಾಗಿ ಮುಂದುವರೆದುಕೊಂಡು ಬಂದಿದೆ. ವಿಶೇಷವಾಗಿ ಜಿಲ್ಲೆಯ ಜನರು ಲಾಕ್‍ಡೌನ್ ಅವಧಿಯಲ್ಲಿ ಜಾಗೃತರಾಗಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸಿದ್ದಾರೆ. ಹೀಗಾಗಿ ಜಿಲ್ಲೆ ಹಸಿರು ವಲಯದಲ್ಲಿ ಉಳಿದಿದೆ. ಮುಂದೆಯೂ ಸಹ ಜಿಲ್ಲೆಯನ್ನು ಹಸಿರು ವಲಯದಲ್ಲಿಯೇ ಉಳಿಸಿಕೊಂಡು ಹೋಗುವ ಸವಾಲು ನಮ್ಮ ಮುಂದಿದೆ. ಜನರ ಸಹಕಾರ ಇದೇ ರೀತಿ ಇರಲಿ ಎಂದು ತಾವು ಬಯಸುವುದಾಗಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದರು.

Desk

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

22 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

40 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

53 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago