Categories: ಕರ್ನಾಟಕ

ಕೊರೋನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಿ ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ; – ಕೊರೊನಾ ನಿಯಂತ್ರಣಕ್ಕೆ ವೀಕೆಂಡ್ ಲಾಕ್‍ಡೌನ್ ಸಾಲುವುದಿಲ್ಲ. ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷಗಳ ಕಾಲ ಹಬ್ಬ, ಜಾತ್ರೆಗಳಿಗೆ ನಿಷೇಧ ಹೇರಬೇಕು. ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಕೇರಳ, ಮಹಾರಾಷ್ಟ್ರದ ಗಡಿಭಾಗದ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ. 3ನೇ ಅಲೆ ಬರುವ ಆತಂಕವೂ ಇದೆ. ಹೀಗಾಗಿ ಕಟ್ಟೆಚ್ಚರ ಅಗತ್ಯವಿದ್ದು, ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಜನ ಕೂಡ ಮಾಸ್ಕ್ ಧರಿಸಬೇಕು, ಸರ್ಕಾರ ಹೆಚ್ಚು ಪ್ರಮಾಣದಲ್ಲಿ ಲಸಿಕೆ ತರಿಸಬೇಕು, 6 ವರ್ಷದ ಮಕ್ಕಳಿಗೂ ಲಸಿಕೆ ನೀಡಲು ಸಂಶೋಧನೆಗಳಾಗಬೇಕು, ಸಭೆಗಳ ಮೇಲೆ ಸಭೆ ನಡೆಸಿದರೆ ಸಾಲದು.ಯಡಿಯೂರಪ್ಪ ಕೂಡ ಸಭೆಗಳ ಮೇಲೆ ಸಭೆ ಮಾಡುತ್ತಿದ್ದರು. ಅದರಿಂದ ಏನೂ ಪ್ರಯೋಜನವಾಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಇನ್ನು ಟೇಕಾಫ್ ಆಗಿಲ್ಲ. ಉಳಿದ ಅವಯನ್ನೂ ಪೂರೈಸುವುದಿಲ್ಲ. ಮಂತ್ರಿಯಾಗದೆ ಇರುವ ಬಹಳಷ್ಟು ಮಂದಿ ಬಿಜೆಪಿಯಲ್ಲಿದ್ದಾರೆ.ಅವರು ಹಂತ ಹಂತವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮೈಸೂರು, ಚಾಮರಾಜನಗರ ಸೇರಿ 13 ಜಿಲ್ಲೆಗಳಿಗೆ ಸಂಪುಟದಲ್ಲಿ ಅವಕಾಶವೇ ಇಲ್ಲ. ಸರ್ಕಾರದಲ್ಲಿ ಇನ್ನೂ ಸಾಕಷ್ಟು ಗೊಂದಲಗಳಿವೆ. ಇದನ್ನೆಲ್ಲ ಬಗೆಹರಿಸುವುದರಲ್ಲಿ ಬಿಜಿ ಆಗಿರುವ ನಾಯಕರಿಗೆ ಕೊರೋನ ನಿಯಂತ್ರಣ ಹಿನ್ನಡೆ ಆಗಿದೆ ಎಂದರು.

Indresh KC

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

22 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

31 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

32 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

53 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago