News Karnataka Kannada
Saturday, May 04 2024
ಕರ್ನಾಟಕ

ಕೊರೋನಾ ಪಾಸಿಟಿವಿಟಿ ದರ ಶೇಕಡಾ 2 ಕ್ಕಿಂತ ಕಡಿಮೆ ಇರುವೆಡೆ ಶಾಲೆ ತೆರೆಯಲು ಸರ್ಕಾರ ನಿರ್ಧಾರ

Basavaraj Bommaih V Ponnuraj 01082021
Photo Credit :

 

ಬೆಂಗಳೂರು: ಕೋವಿಡ್ ಪ್ರಕರಣ ಶೇ.2 ಕ್ಕಿಂತ ಹೆಚ್ಚಾದರೆ ಕಠಿಣ ನಿಯಮ ಜಾರಿಗೊಳಿಸಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಸಿಎಂ ಬೊಮ್ಮಾಯಿಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವೈಜ್ಞಾನಿಕವಾದಂತಹ, ಅಂಕಿ- ಅಂಶ ಸಮೇತವಾಗಿ ಸಭೆಯಲ್ಲಿ ಕೋವಿಡ್ ಸ್ಥಿತಿಗತಿ ಅವಲೋಕಿಸಲಾಗಿದೆ. ಪಕ್ಕದ ರಾಜ್ಯ ಕೇರಳ ಕೋವಿಡ್ ಸ್ಥಿತಿಗತಿ ಬಗ್ಗೆ ವಿವರವಾಗಿ ಚರ್ಚೆ ಮಾಡಲಾಗಿದೆ. ಕೋವಿಡ್ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಶೇ.2 ಪಾಸಿಟಿವಿಟಿ ದರ ಹೆಚ್ಚಾದರೆ, ಆಕ್ಸಿಜನ್ ಬೆಡ್ ಶೇ.10 ಆಕ್ಯುಪೈ ಆದರೆ ಕಠಿಣ ನಿಯಮ ಹೇರಲು ಸೂಚನೆ ನೀಡಲಾಗಿದೆ ಎಂದರು.ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಪಾಸಿಟಿವಿಟಿ ದರ ಹೆಚ್ಚಿದೆ. ಇಲ್ಲಿ ಟೆಸ್ಟಿಂಗ್ ಮತ್ತು ಲಸಿಕೆ ಹೆಚ್ಚಾಗಬೇಕು ಎಂದು ಸೂಚಿಸಲಾಗಿದೆ ‌ಎಂದು ಹೇಳಿದರು.ಗಡಿ ಗ್ರಾಮಗಳಲ್ಲಿ ಕಡ್ಡಾಯ ಟೆಸ್ಟಿಂಗ್​ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳ 10 ಕಿಮೀ‌ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕಡ್ಡಾಯ ಟೆಸ್ಟಿಂಗ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಕಲಬುರಗಿ, ತುಮಕೂರು, ರಾಯಚೂರು, ಬೀದರ್, ಹಾವೇರಿ, ವಿಜಯಪುರ ಇತರ ಜಿಲ್ಲೆಗಳಲ್ಲಿ ಟೆಸ್ಟಿಂಗ್ ಹೆಚ್ಚಿಸಬೇಕು ಎಂದು ನಿರ್ದೇಶಿಸಲಾಗಿದೆ ಎಂದರು.
6 ಜೀನೋಮ್​ ಟೆಸ್ಟಿಂಗ್ ಲ್ಯಾಬ್ ಪ್ರಾರಂಭಿಸಲು ತೀರ್ಮಾನ ಮಾಡಲಾಗಿದೆ. ಮೂರು ವಾರದಲ್ಲಿ ಲ್ಯಾಬ್ ಪ್ರಾರಂಭವಾಗಲಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ಕಲಬುರಗಿ, ಬೆಳಗಾವಿಯಲ್ಲಿ ಲ್ಯಾಬ್ ಆರಂಭಿಸುತ್ತೇವೆ ಎಂದು ತಿಳಿಸಿದರು.ಪಾಸಿಟಿವಿಟಿ ದರ ಶೇ.2 ಕಡಿಮೆ ಇರುವ ಕಡೆ ಶಾಲೆ ಆರಂಭ:ಶೆ.2 ಪಾಸಿಟಿವಿಟಿ ದರ ಕಡಿಮೆ ಇರುವ ಕಡೆ ಶಾಲೆ ಆರಂಭ ಮಾಡಲಾಗುತ್ತದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. ಜಿಲ್ಲಾವಾರು ಪಾಸಿಟಿವಿಟಿ ದರ ನೋಡಿಕೊಂಡು ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ. ಗಡಿ ಜಿಲ್ಲೆಗಳಲ್ಲೂ ಶೇ.2 ಪಾಸಿಟಿವಿಟಿ ದರ ಕಡಿಮೆ ಇದ್ದರೆ ಶಾಲೆ ಆರಂಭಿಸಲು ಸೂಚಿಸಲಾಗಿದೆ. ಗಡಿ ಪಕ್ಕದ ತಾಲೂಕುಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು