News Karnataka Kannada
Sunday, May 12 2024
ಕರ್ನಾಟಕ

ಕೊರೋನಾ: ಮಂಡ್ಯ ಡಿಎಚ್‍ಓ ಕಚೇರಿ ಸೀಲ್‍ಡೌನ್

Photo Credit :

ಕೊರೋನಾ: ಮಂಡ್ಯ ಡಿಎಚ್‍ಓ ಕಚೇರಿ ಸೀಲ್‍ಡೌನ್

ಮಂಡ್ಯ: ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆಯ ಡಿ ಗ್ರೂಪ್ ನೌಕರನಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಡಿಎಚ್‍ಓ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ.

ಇತ್ತೀಚೆಗೆ ಬಿ.ಎಂ.ಟಿಸಿ ನೌಕರನೊಬ್ಬನಿಗೆ ಸೋಂಕು ಕಾಣಿಸಿಕೊಂಡಿದ್ದು, ಆತನ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದವರನ್ನು ಗುರುತಿಸುವ ಕಾರ್ಯವನ್ನು ಅಧಿಕಾರಿಗಳು ನಡೆಸಿದ್ದರು. ಈ ಸಂದರ್ಭದಲ್ಲಿ ಡಿಎಚ್‍ಓ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಡಿ ಗ್ರೂಪ್ ನೌಕರನೂ ಬಿಎಂಟಿಸಿ ನೌಕರರನೊಂದಿಗೆ ಸಂಪರ್ಕ ಹೊಂದಿದ್ದು ಬೆಳಕಿಗೆ ಬಂದಿತ್ತು. ತಕ್ಷಣ ಆತನನ್ನು ಕ್ವಾರಂಟೈನ್‍ಗೆ ಒಳಪಡಿಸಿ ಗಂಟಲ ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಪ್ರಯೋಗಾಲಯದ ಪರೀಕ್ಷೆ ಬಂದಿದ್ದು, ಆತನಿಗೂ ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಡಿಎಚ್‍ಓ ಕಚೇರಿಯನ್ನು ಸೀಲ್‍ಡೌನ್ ಮಾಡಿ, ಕಚೇರಿಯ ನೌಕರ ಮತ್ತು ಸಿಬ್ಬಂದಿಗಳನ್ನು ತಪಾಸಣೆಗೊಳಪಡಿಸಲಾಗಿತ್ತು.

ಇತ್ತೀಚೆಗೆ ನಡೆದ ವೈದ್ಯಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಾಫಿ, ಟೀ ಸರಬರಾಜು ಮಾಡಿದ್ದ. ಇದರಿಂದಾಗಿ ಸ್ವಲ್ಪ ಮಟ್ಟಿನ ಆತಂಕದ ವಾತಾವರಣವೂ ಉಂಟಾಗಿದ್ದು, ಆದರೆ, ವೈದ್ಯರ ಸಭೆಯಲ್ಲಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿರುವ ಕಾರಣ ಸೋಂಕು ಇತರರಿಗೆ ಹರಡಿಲ್ಲ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಕಚೇರಿಯ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಲ್ಲಿ ಅವರನ್ನೂ ಸಹ ಐಸೋಲೇಷನ್ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಪಿ. ಮಂಚೇಗೌಡ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು