ಬೆಂಗಳೂರು, ;ಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆ ಹೆಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ ನೀಡಿದೆ. ಪ್ರತಿ ಜಿಲ್ಲೆಯಲ್ಲಿ ಒಟ್ಟಾರೆ ಪರೀಕ್ಷೆಯಲ್ಲಿ ಶೇ.70 ಆರ್ಟಿಪಿಸಿಆರ್ ಹಾಗೂ ಶೇ.30 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ನಡೆಸಬೇಕು. ಒಟ್ಟು ಪರೀಕ್ಷೆಯ ಅರ್ಧದಷ್ಟು ತಾಲೂಕು ಕೇಂದ್ರಗಳ ಹೊರಗೆ ನಡೆಯಬೇಕೆಂದು ಆಯೋಗ ಆದೇಶದಲ್ಲಿ ತಿಳಿಸಿದೆ.
ಒಟ್ಟು ಪರೀಕ್ಷೆಯಲ್ಲಿ ಕಡ್ಡಾಯವಾಗಿ ಶೇ.10 ಪರೀಕ್ಷೆ ಮಕ್ಕಳಿಗೆ ನಡೆಸಬೇಕು ಎಂದು ಆದೇಶಿಸಲಾಗಿದೆ. 15ರಿಂದ 18 ವರ್ಷದ ಮಕ್ಕಳಲ್ಲಿ ಸೋಂಕಿನ ಲಕ್ಷಣಗಳಿದ್ದರೆ ಕಡ್ಡಾಯವಾಗಿ ರ್ಯಾಪಿಡ್ ಆ್ಯಂಟಿಜಿನ್ ಪರೀಕ್ಷೆ ನಡೆಸಬೇಕು ಮತ್ತು ಪಾಸಿಟಿವಿಟಿ ದರ ಶೇ.5ಕ್ಕಿಂತಲೂ ಹೆಚ್ಚು ಇರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಸಂಪರ್ಕಿತರು, ಅವರ ಸಂಬಂಧಿಕರಿಗೆ ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಸೂಚಿಸಿದೆ.
ಕೊರೋನ ಪರೀಕ್ಷೆ ಹೆಚ್ಚಿಸುವಂತೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.