ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ತುಸು ಇಳಿಮುಖವಾಗಿದೆ. 24 ಗಂಟೆಯಲ್ಲಿ 1,610 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,16,927ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಒಂದೇ ದಿನದಲ್ಲಿ ಮಹಾಮಾರಿಗೆ 32 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,773ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 357 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,30,138ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,640 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,55,862ಕ್ಕೆ ಏರಿಕೆಯಾಗಿದೆ. ಇನ್ನು 24,266 ಸಕ್ರೀಯ ಪ್ರಕರಣಗಳಿವೆ.