ಕರ್ನಾಟಕ

ಕೋವಿಡ್‌: ಬೆಂಗಳೂರಿನಲ್ಲಿ 318, ದಕ್ಷಿಣ ಕನ್ನಡದಲ್ಲಿ 326

ಬೆಂಗಳೂರು: ರಾಜ್ಯದಲ್ಲಿ 1,432 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,34,624ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 27 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,088ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 318 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,34,157ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 326 ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇಂದು 1,538 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,76,377ಕ್ಕೆ ಏರಿಕೆಯಾಗಿದೆ. ಇನ್ನು 21,133 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,76,977 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,432 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.80ಕ್ಕೆ ಇಳಿದಿದೆ.

Sampriya YK

Recent Posts

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

2 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

12 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

32 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

42 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 hours ago