ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಇಳಿಮುಖವಾಗುತ್ತಿದೆ. 24 ಗಂಟೆಯಲ್ಲಿ 1,285 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,08,284ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಒಂದೇ ದಿನದಲ್ಲಿ ಮಹಾಮಾರಿಗೆ 25 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,612ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 290 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,28,038ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,383 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,47,627ಕ್ಕೆ ಏರಿಕೆಯಾಗಿದೆ. ಇನ್ನು 24,021 ಸಕ್ರೀಯ ಪ್ರಕರಣಗಳಿವೆ ಎಂದು ತಿಳಿಸಿದೆ.