ಬೆಂಗಳೂರು: ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,338 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 29,21,049ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಒಂದೇ ದಿನದಲ್ಲಿ ಮಹಾಮಾರಿಗೆ 31 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,848ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 315 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,31,097ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,947 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,61,499ಕ್ಕೆ ಏರಿಕೆಯಾಗಿದೆ. ಇನ್ನು 22,676 ಸಕ್ರೀಯ ಪ್ರಕರಣಗಳಿವೆ.
ರಾಜ್ಯದಾದ್ಯಂತ ಇಂದು 1,26,400 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,338 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.05ಕ್ಕೆ ಇಳಿದಿದೆ.