ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 56ವರ್ಷದ ಪೇದೆ ರೇವಣ್ಣ ಕೋವಿಡ್ 19ಗೆ ಬಲಿಯಾಗಿದ್ದಾರೆ.
ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಕುಮಾರ್ ಪಾಟೀಲ್ ಅವರು ಟ್ವೀಟ್ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ದೇವರು ಇವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ.ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇವೆ.