News Karnataka Kannada
Thursday, May 02 2024
ಕರ್ನಾಟಕ

ಕೋವಿಡ್ 3ನೇ ಅಲೆ ತಡೆಗೆ ನೂತನ ಕಾರ್ಯತಂತ್ರ

Covid
Photo Credit :

ಬೆಂಗಳೂರು; ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕಾರ್ಯತಂತ್ರ ರೂಪಾಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಿಲ್ಲಾವಾರು ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇ.10ರಷ್ಟು ಪರೀಕ್ಷೆಗಳನ್ನು 18 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಾಡಬೇಕೆಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹರಡುವಿಕೆ ಮೇಲೆ ನಿಗಾವಹಿಸಲು ಒಟ್ಟಾರೆ ಪರೀಕ್ಷೆಗಳಲ್ಲಿ ಶೇ.50ರಷ್ಟು ಪರೀಕ್ಷೆಗಳನ್ನು ತಾಲ್ಲೂಕು ಕೇಂದ್ರ ಪ್ರದೇಶದ ಹೊರಗೆ ನಡೆಸಲು ಸೂಚಿಸಲಾಗಿದೆ.ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರುವ ಗ್ರಾಮಪಂಚಾಯತ್/ ಪಟ್ಟಣ ಪ್ರದೇಶಗಳಲ್ಲಿ ರೋಗಲಕ್ಷಣರಹಿತ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೊಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು