ಕರ್ನಾಟಕ

ಖಾತೆ ಬದಲಿಸದಿದ್ದರೆ ರಾಜೀನಾಮೆ ಬೆದರಿಕೆ ಒಡ್ಡಿದ ಸಚಿವ ಆನಂದ್‌ ಸಿಂಗ್‌

. ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿರುವುದರ ಬೆನ್ನಲ್ಲೇ, ಅಸಮಾಧಾನ ಸ್ಪೋಟವಾಗಿದೆ. ತಮಗೆ ನೀಡಿರುವ ಖಾತೆಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್‌ ಸಿಂಗ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ತಮ್ಮ ಖಾತೆ ಬದಲಿಸದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಉಳಿಯುವ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
‘ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರ ಬಳಿ ಯಾವ ಖಾತೆ ಬೇಕೆಂದು ಕೇಳಿದ್ದೆ. ನನ್ನ ಮನವಿ ಪರಿಗಣಿಸುವುದಾಗಿ ಹೇಳಿದ್ದರು. ಆದರೆ, ಈಗ ಬೇರೆ ಖಾತೆ ಕೊಡಲಾಗಿದೆ. ಇದರಿಂದ ನನಗೆ ಅಸಮಾಧಾನವಾಗಿರುವುದು ನಿಜ’ ಎಂದು ಆನಂದ್‌ ಸಿಂಗ್‌ ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಚುಟುಕು ಸಂದರ್ಶನದಲ್ಲಿ ಹೇಳಿದ್ದಾರೆ.‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನೇ ಕಾರಣ. 2019ರಲ್ಲಿ ಮೊದಲು ರಾಜೀನಾಮೆ ನೀಡಿದ್ದೂ ನಾನೇ. ಎಂಟು ದಿನಗಳ ಬಳಿಕ ಒಬ್ಬೊಬ್ಬರಾಗಿ ರಾಜೀನಾಮೆ ನೀಡಿದರು. ಪರಿಣಾಮವಾಗಿ ಬಿಜೆಪಿ ಸರ್ಕಾರ ಬಂತು. ಇದನ್ನು ವರಿಷ್ಠರು ಗಮನದಲ್ಲಿ ಇಟ್ಟುಕೊಂಡು ಖಾತೆ ಹಂಚಿಕೆ ಮಾಡಬೇಕಾಗಿತ್ತು’ ಎಂದೂ ಅವರು ತಿಳಿಸಿದ್ದಾರೆ.
‘ಇಂಧನ ಮತ್ತು ಲೋಕೋಪಯೋಗಿ ಖಾತೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ’ ಎಂದು ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್‌ ಸಿಂಗ್‌ ಆಪ್ತರ ಬಳಿ ಹೇಳಿಕೊಂಡಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ಮಂತ್ರಿ ಬೊಮ್ಮಾಯಿ ಅವರು ಆನಂದ್‌ ಸಿಂಗ್‌ ನನ್ನ ಸ್ನೇಹಿತರಾಗಿದ್ದು ಅವರನ್ನು ಕರೆದು ಮಾತನಾಡುವುದಾಗಿ ತಿಳಿಸಿದ್ದಾರೆ.

Indresh KC

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

17 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

31 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

50 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

2 hours ago