Categories: ಕರ್ನಾಟಕ

ಗಣೇಶ ಚತುರ್ಥಿ, ಮೊಹರಂ ಹಬ್ಬ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು ; ಮುಂಬರುವ ಆಗಸ್ಟ್​​ ಸೆಪ್ಟೆಂಬರ್​ಗಳಲ್ಲಿ ಕೃಷ್ಣ ಜನ್ಮಾಷ್ಟಮಿ, ಗಣೇಶ್​, ಮೊಹರಂ, ದುರ್ಗಾ ಪೂಜೆ ಸೇರಿದಂತೆ ಹಬ್ಬಗಳ ಸಂಭ್ರಮದಲ್ಲಿ ಜನರು ಮೈಮರೆತು ಭಾಗಿಯಾಗುವುದರಿಂದ ಮತ್ತಷ್ಟು ಕೋವಿಡ್‌ ಪ್ರಕರಣ ಹೆಚ್ಚುವ ಆತಂಕ ಮೂಡಿದೆ. ಈ ಹಿನ್ನಲೆ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಹಬ್ಬ ಹರಿದಿನಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಗಳನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸಿ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಕೂಡ ಸರ್ಕಾರ ತಿಳಿಸಿದೆ.

ಹಬ್ಬವನ್ನು ಆಚರಿಸುವ ಸಂಬಂಧ ಹೊರಡಿಸಲಾದ ಸರ್ಕಾರದ ಮಾರ್ಗಸೂಚಿಗಳು ಈ ಕೆಳಗಿನಂತಿವೆ.
ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಬೇಕು
ದೇವಸ್ಥಾನದೊಳಗೆ ಹಾಗೂ ಮನೆಗಳಲ್ಲಿ ಆಚರಿಸಲು ಸೂಚನೆ
ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್/ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆಗಿಲ್ಲ ಅನುಮತಿ
ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ
ಮೂರ್ತಿಗಳನ್ನ ಮನೆಯಲ್ಲಿಯೇ ವಿಸರ್ಜಿಸಲು ಸೂಚನೆ
ಇಲ್ಲದಿದ್ರೆ ಮಹಾನಗರ ಪಾಲಿಕೆ / ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳ ವತಿಯಿಂದ ನಿರ್ಮಿಸಲಾದ ಹೊಂಡ, ಕಲ್ಯಾಣಿ, ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು
ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸಾನಿಟೈಸೇಷನ್ ಮಾಡಬೇಕು
ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್​ ಸ್ಕ್ರೀನಿಂಗ್​ ಕಡ್ಡಾಯ
ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್-19 ಮಾರ್ಗಸೂಚಿಯಂತೆ ಕಡ್ಡಾಯ ಮಾಸ್ಕ್​​ ಧರಿಸಬೇಕು
ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು
ಸರ್ಕಾರ ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಿಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು
ಮೊಹರಂ ಹಬ್ಬವನ್ನು ಆಚರಿಸುವ ಸಂಬಂಧ ಸರ್ಕಾರದ ಮಾರ್ಗಸೂಚಿಗಳು :
ಸಾರ್ವಜನಿಕ ಸ್ಥಳಗಳಲ್ಲಿ ಅಲಂಗಳನ್ನು ಪಂಜಾವನ್ನು ಸ್ಥಾಪಿಸುವುದು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ.
ದಿನಾಂಕ:12.08.2021 ರಿಂದ 20.08.2021 ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧ
ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು
ಪಂಜ, ಆಲಂ ಮತ್ತು ತಾಜಿಯಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡಬೇಕು
ಖಬರಸ್ಕಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ
ಖಬರಸ್ಥಾನಗಳಿಗೆ ಕೇವಲ ದವನ ಮಾಡಲು ಮಾತ್ರ ಅನುಮತಿ ನೀಡಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.
ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​​​ ಕಡ್ಡಾಯವಾಗಿ ಧರಿಸತಕ್ಕದ್ದು

Indresh KC

Recent Posts

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

17 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

36 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

49 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

3 hours ago