ನಾಗಮಂಗಲ: ಆದಾಯ ತೆರಿಗೆ ಅಧಿಕಾರಿಗಳು ಭಾನುವಾರ ಬೆಳಗ್ಗೆ ನಾಗಮಂಗಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್. ಚಲುವರಾಯಸ್ವಾಮಿ ಬೆಂಬಲಿಗರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಐಟಿ ಅಧಿಕಾರಿಗಳು ದಾಳಿ ನಡೆಸಿ, ಕೆಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಆರ್. ಉಮೇಸ್ ಮತ್ತು ಖಾನಾಪುರ ಜೆಡಿಎಸ್ ಅಭ್ಯರ್ಥಿ ನಾಸಿರ್ ಬಾಗವಾನ್ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.