ಭಾರತೀನಗರ: ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಭತ್ತಕ್ಕೆ ಬೆಂಕಿ ರೋಗ ಕಾಣಿಸಿಕೊಳ್ಳುವ ಮೂಲಕ ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಅಡೀಗೌಡರ ಮಗ ನಿಂಗೇಗೌಡರ ಜಮೀನಿನಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ನಿಂಗೇಗೌಡ ಅವರು ಎಂದಿನಂತೆ ತಮ್ಮ ಮೂರೂವರೆ ಎಕರೆ ಜಮೀನಿನಲ್ಲಿ ಭತ್ತ ಬೆಳೆದಿದ್ದರು. ಭತ್ತ ಇನ್ನೇನು ಕೈಗೆ ಬರುವ ಸಂದರ್ಭದಲ್ಲಿಯೇ ಬೆಂಕಿ ರೋಗ ಕಾಣಿಸಿಕೊಂಡು ನಷ್ಟ ಅನುಭವಿಸುವಂತಾಗಿದೆ. ಮೊದಲಿಗೆ ಅಲ್ಲಲ್ಲಿ ಕಾಣಿಸಿಕೊಂಡ ಬೆಂಕಿರೋಗ ಇದೀಗ ನಿಂಗೇಗೌಡರವರ ಮೂರೂವರೆ ಎಕರೆ ಜಮೀನಿನಲ್ಲಿನ ಬೆಳೆದಿರುವ ಬೆಳೆಯನ್ನು ಸಂಪೂರ್ಣವಾಗಿ ಆವರಿಸಿದೆ.
ವಿಷಯ ತಿಳಿದು ಕೃಷಿ ಇಲಾಖೆ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಭತ್ತದ ಕೆಲ ಭಾಗಗಳನ್ನು ತೆಗೆದುಕೊಂಡು ಪ್ರಯೋಗಾಲದಲ್ಲಿ ಪರೀಕ್ಷೆಗೆ ಕಳುಹಿಸಿದ್ದಾರೆ. ಬೆಂಕಿ ರೋಗ ತಡೆಗೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಬೆಂಕಿ ರೋಗ ಕಾಣಿಸಿಕೊಂಡು ರೈತರು ನಷ್ಟ ಅನುಭವಿಸಬೇಕಾಗುತ್ತೆ. ರೋಗಬಾಧೆಗೆ ಒಳಗಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಮುಖಂಡ ನಿಂಗೇಗೌಡ ಮನವಿ ಮಾಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…