Categories: ಕರ್ನಾಟಕ

ಚಿನ್ನ ಗೆದ್ದ ನೀರಜ್‌ ಚೋಪ್ರಾಗೆ ಕನ್ನಡಿಗ ಕಾಶಿನಾಥ್‌ ಕೋಚ್‌ ಆಗಿರಲಿಲ್ಲ: ಅಥ್ಲೆಟಿಕ್ಸ್‌ ಫೆಡರೇಷನ್‌

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌-2020ನ ಜಾವೆಲಿನ್‌ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ ಅವರಿಗೆ ಕನ್ನಡಿಗ ಕಾಶೀನಾಥ್‌ ನಾಯ್ಕ ಎಂಬ ಹೆಸರಿನ ಯಾವುದೇ ಕೋಚ್‌ ಅನ್ನು ನೇಮಕ ಮಾಡಿರಲಿಲ್ಲ ಎಂದು ಅಥ್ಲೆಟಿಕ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ಅಧ್ಯಕ್ಷ ಅದಿಲ್ಲೆ ಸುಮರಿವಾಲ್ಲಾ ಸ್ಪಷ್ಟಪಡಿಸಿದ್ದಾರೆ.
ಕಾಶಿನಾಥ್‌ ಅವರು ಕೋಚ್‌ ಎಂಬ ಕಾರಣಕ್ಕೆ ಕರ್ನಾಟಕ ಸರ್ಕಾರ ಬಹುಮಾನ ಘೋಷಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ದೊರಕಿದರೆ ರಾಜ್ಯ ಸರ್ಕಾರಕ್ಕೆ ಆಕ್ಷೇಪ ಸಲ್ಲಿಸಲಾಗುವುದು ಎಂದು ಅದಿಲ್ಲೆ ತಿಳಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್‌ ಚೋಪ್ರಾಗೆ ಕನ್ನಡಿಗ ಕಾಶಿನಾಥ್‌ ನಾಯ್ಕ್‌ ಕೋಚ್‌ ಆಗಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದು ಕರ್ನಾಟಕದ ಹೆಮ್ಮೆ ಎಂದು ರಾಜ್ಯ ಸರ್ಕಾರ ಕಾಶಿನಾಥ್‌ಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಆದರೆ, ಕಾಶಿನಾಥ್‌ ಅವರು ತಮ್ಮ ಕೋಚ್‌ ಎಂದು ನೀರಜ್‌ ಚೋಪ್ರಾ ಹೇಳಿಲ್ಲ, ನಾವೂ ಹೇಳಿಲ್ಲ. ಕಾಶಿನಾಥ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಹೀಗಿರುವಾಗ ಕರ್ನಾಟಕ ಸರ್ಕಾರ ಅವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ನಮಗೆ ಅಧಿಕೃತ ಪತ್ರ ವ್ಯವಹಾರ ಆದ ಬಳಿಕ ಸಂಬಂಧಪಟ್ಟವರಿಗೆ ಈ ಬಗ್ಗೆ ದೂರು ನೀಡಲಾಗುವುದು ಎಂದು ಹೇಳಿದ್ದಾರೆ.

Indresh KC

Recent Posts

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

13 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

40 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

48 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

48 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

1 hour ago