Categories: ಕರ್ನಾಟಕ

ಜಮೀನು ಸರ್ವೆ ಮಾಡಿಕೊಡಲು 70 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರ ಸೆರೆ

ಬೆಂಗಳೂರು, ; ಜಮೀನಿನ ಸುತ್ತಳತೆ ನಿಗಧಿ ಪಡಿಸಲು 70ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಆನಂದ್ ಕುಮಾರ್ ಮತ್ತು ಆತನ ಮೂವರು ಸಹಾಯಕ ಸಿಬ್ಬಂದಿಯನ್ನು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ವ್ಯವಸ್ಥಿತವಾಗಿ ದಾಳಿ ಮಾಡಿ ಬಂಧಿಸಿದ್ದಾರೆ.
ಜಮೀನಿಗೆ ಸುತ್ತಳತೆ ನಿಗಧಿ ಪಡಿಸಿ ಗೆರೆ ಎಳೆಯಲು 70 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟ ದೂರಿನ ಸಂಬಂಧ ನಿನ್ನೆ ರಾತ್ರಿ ನಗರದ ಮೂರು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಬಳಿಯ ಕುದುರುಗೆರೆಯ ಜಮೀನು ಸರ್ವೆ ನಂ. 145, 146ಕ್ಕೆ ಸುತ್ತಳತೆ ನಿಗಧಿ ಪಡಿಸಿ ಗೆರೆ ಎಳೆಯಲು ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಮುಂಗಡವಾಗಿ 20 ಲಕ್ಷ ರೂ ಹಣ ಅಲ್ಲದೇ ಬ್ಯಾಂಕ್ ಚೆಕ್ ಪಡೆದಿದ್ದ. ಇದರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದು ಅನಂದ್ ಕುಮಾರ್ ಅವರ ಜಾಲಹಳ್ಳಿ ಮನೆ ಕುಸುಮಲತಾ ಮನೆ ಮತ್ತು ಸರ್ವೆ ಅಧಿಕಾರಿ ಶ್ರೀನಿವಾಸ್?ಗೆ ಸೇರಿದ ತುಮಕೂರಿನ ಮನೆ ಸೇರಿ ಮೂರು ಕಡೆ ದಾಳಿ ನಡೆಸಿದ್ದರು. ದಾಳಿ ವೇಳೆ ಅಧಿಕಾರಿಗಳು ಆನಂದ್ ಮನೆಯಲ್ಲಿ 25.30 ಲಕ್ಷ ನಗದು, 70 ಲಕ್ಷ ಮೊತ್ತದ ಮೂರು ಚೆಕ್ ಹಾಗೂ ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಕುಸುಮಾ ಲತಾ ಮನೆಯಲ್ಲಿ ಏನೂ ಸಿಕ್ಕಿಲ್ಲ. ಸರ್ವೆಯರ್ ಶ್ರೀನಿವಾಸ್ ಮನೆಯಲ್ಲಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Indresh KC

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

6 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago