ಬೆಂಗಳೂರು, – ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ-2022 ಯಶಸ್ವಿಯಾಗಿ ನಡೆಸುವುದರ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ನೂತನ ಕಚೇರಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2022ಕ್ಕೆ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಕೋವಿಡ್ ಸಂದರ್ಭದಲ್ಲಿ ಆರು ತಿಂಗಳ ಅವಧಿಯಲ್ಲಿ ಯಶಸ್ವಿಯಾಗಿ ಮಾಡಲು ಆಗುತ್ತದೆಯೋ ಇಲ್ಲವೋ ಎಂಬ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಮೈಸೂರು ಲ್ಯಾಂಪ್ ಬಳಿ 21 ಎಕರೆ ಜಾಗವಿದ್ದು, ಅಲ್ಲಿ ಥೀಮ್ಪಾರ್ಕ್ ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿದ್ದು, ಇದೇ 19ರಂದು ಭೂಮಿ ಪೂಜೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಎನ್ಜಿಎಫ್ನಲ್ಲಿ 500 ಎಕರೆ ಜಮೀನಿದ್ದು, ಅಲ್ಲಿ ಟ್ರೀ ಪಾರ್ಕ್ ಮಾಡಲಾಗುತ್ತದೆ ಎಂದು ಹೇಳಿದರು. ರಾಜ್ಯ ಕೈಗಾರಿಕಾ ಇಲಾಖೆ ಜತೆ ಉತ್ತಮ ಸಂಬಂಧ ಹೊಂದುವ ನಿಟ್ಟಿನಲ್ಲಿ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ ಎಂದು ಹೇಳಿದರು.
ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಯೋಜನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.