ಜಾತಿವಾರು ಜನಗಣತಿ ವರದಿ ಕುರಿತು ಸರ್ಕಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು: ಜಾತಿವಾರು ಜನಗಣತಿ ವರದಿ ಕುರಿತು ಸರ್ಕಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಮಂಗಳವಾರ ಹೇಳಿದ್ದಾರೆ.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆರ್ಥಿಕ ಕಾರಣದಿಂದ ಹಣ ಬಿಡುಗಡೆಗೆ ಸಮಸ್ಯೆ ಆಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜನಗಣತಿ ಮಾಡಿಸಿದ್ದರು. ಹಿಂದುಳಿದವರ ಪರ ಸಿದ್ದರಾಮಯ್ಯರವರು ಧ್ವನಿ ಎತ್ತಿದ್ರು. ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಅವರ ಅವಧಿಯಲ್ಲಿ ಅದನ್ನು ಏಕೆ ಬಿಡುಗಡೆ ಮಾಡಿಲ್ಲವೆಂಬುದುಗೊತ್ತಿಲ್ಲ. ಆಯೋಗದ ಅಧ್ಯಕ್ಷ ಹೆಚ್ಚಿನ ಸಮಯ ಬೇಕೆಂದು ಕೇಳಿದ್ದಾರೆ. ವರದಿ ಕೊಟ್ಟ ಬಳಿಕ ಸಂಪುಟ ಸಭೆಯಲ್ಲಿ ಚರ್ಚೆ ಮಾಡ್ತೇವೆ ಎಂದು ಹೇಳಿದ್ದಾರೆ.

ವರದಿ ಕುರಿತು ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಮತ್ತು ಈ ಹಿಂದೆ ಇದ್ದ ಯಾವುದೇ ಗೊಂದಲಕ್ಕೆ ನಾವು ಜವಾಬ್ದಾರರಲ್ಲ. ಪರಿಶಿಷ್ಟ ಜಾತಿಯ ಸುಮಾರು 1.27 ಕೋಟಿ ಜನರಿಗೆ ಎಲ್ಲಾ ಮೂಲಭೂತ ಸೌಕರ್ಯಗಳು, ಮನೆ, ಕುಡಿಯುವ ನೀರು, ವಿದ್ಯುತ್ ಮತ್ತು ಆಸ್ತಿ ದಾಖಲೆಗಳನ್ನು ಒದಗಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಆಯೋಗದ ಸದಸ್ಯರು, ಕಾರ್ಯದರ್ಶಿಗಳು ವರದಿಗೆ ಸಹಿ ಹಾಕಿಲ್ಲ. ವರದಿಯನ್ನು ಪರಿಶೀಲಿಸಲು ಅವರಿಗೂ ಕಾಲಾವಕಾಶ ಬೇಕಿದೆ ಎಂದು ಹೇಳಿದ್ದಾರೆ. ಮೊದಲು ಆಯೋಗದ ಕಾರ್ಯದರ್ಶಿಗಳು ಪರಿಶೀಲಿಸಿ ಸಹಿ ಹಾಕಿದ ಬಳಿಕ ಅದನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ನಂತರ ಸಂಪುಟ ಸಭೆಯಲ್ಲಿ ಈ ವರದಿ ಪ್ರಸ್ತಾಪಿಸಿ ಅನುಮೋದನೆ ಪಡೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Sneha Gowda

Recent Posts

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

13 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

13 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

32 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

36 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

60 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

1 hour ago