News Karnataka Kannada
Friday, May 03 2024
ಕರ್ನಾಟಕ

ಜಾರಿ ನಿರ್ದೇಶನಾಲಯ ನೋಟೀಸ್‌ ; ಶಾಸಕ ಜಮೀರ್‌ ಅಹ್ಮದ್‌ ದೆಹಲಿಗೆ

Jameer Ahmadh Khan It Bng 05082021
Photo Credit :

ಬೆಂಗಳೂರು, ;ಮನೆ ಕಚೇರಿ ಇನ್ನಿತರ ಕಡೆಗಳಲ್ಲಿ ಇತ್ತೀಚೆಗೆ ದಾಳಿ ನಡೆಸಿರುವ ಸಂಬಂಧ ಜಾರಿ ನಿರ್ದೇಶನಾಲಯದಿಂದ (ಇ.ಡಿ)ದಿಂದ ನೋಟೀಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನವದೆಹಲಿಗೆ ತೆರಳಿದ್ದಾರೆ.
ಜಮೀರ್ ಅಹಮದ್ ಖಾನ್‌ಗೆ ವಿಚಾರಣೆಗಾಗಿ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದಾರೆ. ಈ ನಡುವೆ ನಾನು ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಲು ಸಾಲು ಟ್ವೀಟ್‌ಗಳ ಮೂಲಕ ಇಡಿ ದಾಳಿ ರಾಜಕೀಯ ಪ್ರೇರಿತ ಮತ್ತು ಮುಸ್ಲಿಂ ನಾಯಕರಿಗೆ ಕಿರುಕುಳ ನೀಡುವ ಪ್ರಯತ್ನ ಎಂದು ಆರೋಪಿಸಿದ್ದಾರೆ.
ನಾನು ಮನೆಯನ್ನು ಕಟ್ಟಿಸಿದ್ದೆ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಈ ಕಾರಣಕ್ಕಾಗಿ ನನ್ನ ಮೇಲೆ ಇ.ಡಿ ದಾಳಿಯಾಯಿತು. ಇ.ಡಿ ಯವರು ಯಾವ ನಿರೀಕ್ಷೆಯಿಂದ ನನ್ನ ಮೇಲೆ ದಾಳಿ ಮಾಡಿದ್ದರೋ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು