ಬೆಂಗಳೂರು, ; ಜಿ.ಟಿ.ದೇವೇಗೌಡ ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮೊಂದಿಗೆ ಅವರು ಮಾತನಾಡಿರುವುದು ಸತ್ಯ ಎಂದು ಸ್ಪಷ್ಟ ಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಟಿಡಿ ನನ್ನ ಜೊತೆ ಮಾತನಾಡಿದ್ದಾರೆ. ತಮ್ಮ ಮಗನಿಗೂ ಟಿಕೆಟ್ ನೀಡುವಂತೆ ಕೇಳಿದ್ದಾರೆ. ಆದರೆ ಯಾವ ಕ್ಷೇತ್ರ ಎಂದು ಹೇಳಿಲ್ಲ ಎಂದರು.
ಈ ಸಂಬಂಧ ಸುರ್ಜೆವಾಲ ಹಾಗೂ ಹೈಕಮಾಂಡ್ನೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಕಾಂಗ್ರೆಸ್ ಫ್ಯೂಸ್ ಕಿತ್ತು ಹಾಕಿದ್ದೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಚುನಾವಣೆ ಬರಲಿ ಎಲ್ಲ ಗೊತ್ತಾಗಲಿದೆ. ಜನರು ಯಾರ ಫ್ಯೂಸ್ ಕಿತ್ತು ಹಾಕುತ್ತಾರೆ ನೋಡೋಣ ಎಂದು ಟಾಂಗ್ ನೀಡಿದರು.ಶಾಲೆ ಆರಂಭದ ಬಗ್ಗೆ ಕುರಿತಂತೆ ಸರ್ಕಾರ ರಾಜ್ಯದಲ್ಲಿನ ಕೋವಿಡ್ ಸ್ಥಿತಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಿದೆ. ಶಾಲೆಗಳನ್ನು ಆರಂಭಿಸದಿದ್ದರೆ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತದೆ.ಅಲ್ಲದೆ ಬೇರೆ ಬೇರೆ ಚಟುವಟಿಕೆಗಳಲ್ಲಿ ಮಕ್ಕಳು ಭಾಗಿಯಾಗುತ್ತಾರೆ. ಹಾಗಾಗಿ ಸರ್ಕಾರ ಶಾಲೆ ಓಪನ್ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ
ಮಾಡಿದರು.
ಜಿಟಿಡಿ ಕಾಂಗ್ರೆಸ್ ಸೇರುವ ಕುರಿತು ಸಿದ್ದರಾಮಯ್ಯ ಹೇಳಿದ್ದೇನು ಗೊತ್ತೇ..?
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.