Categories: ಕರ್ನಾಟಕ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ವಿವಿಧ ಇಲಾಖೆಗಳ ಹಿರಿಯ ಐಎಎಸ್‌ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿರುವ ವಿ. ಪೊನ್ನುರಾಜ್‌ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪರಿಶೀಲನೆ, ಅಹವಾಲು ವಿಚಾರಣೆ, ದಿಢೀರ್‌ ಪರಿಶೀಲನೆ ಮತ್ತು ಯೋಜನೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ವರದಿ ಸಲ್ಲಿಸುವ ಅಧಿಕಾರವನ್ನು ಉಸ್ತುವಾರಿ ಕಾರ್ಯದರ್ಶಿಗಳಿಗೆ ನೀಡಲಾಗಿದೆ. ಹೊಸದಾಗಿ ರಚನೆಯಾಗಿರುವ ವಿಜಯನಗರ ಜಿಲ್ಲೆಗೆ ಉಸ್ತುವಾರಿ ಕಾರ್ಯದರ್ಶಿಯನ್ನು ನೇಮಿಸಿಲ್ಲ.

ಸಿ. ಶಿಖಾ (ಚಿಕ್ಕಮಗಳೂರು), ಕ್ಯಾಪ್ಟನ್‌ ಮಣಿವಣ್ಣನ್‌ ಪಿ. (ಉಡುಪಿ), ಡಾ. ವಿ. ರಾಮ್‌ ಪ್ರಸಾತ್‌ ಮನೋಹರ್‌ (ಮಂಡ್ಯ), ಬಿ.ಬಿ. ಕಾವೇರಿ (ಚಾಮರಾಜನಗರ), ನವೀನ್‌ ರಾಜ್‌ ಸಿಂಗ್‌ (ಹಾಸನ), ವಿ. ಅನ್ಬುಕುಮಾರ್‌ (ಕೊಡಗು), ರಾಕೇಶ್ ಸಿಂಗ್‌ (ತುಮಕೂರು), ಡಾ.ರವಿಕುಮಾರ್‌ ಸುರ್‌ಪುರ್‌ (ಧಾರವಾಡ).

ಡಿ. ರಂದೀಪ್‌ (ವಿಜಯಪುರ), ಮೊಹಮ್ಮದ್ ಮೊಹಿಸಿನ್‌ (ಗದಗ), ಕೆ.ಪಿ. ಮೋಹನ್‌ ರಾಜ್‌ (ಉತ್ತರ ಕನ್ನಡ), ಶಿವಯೋಗಿ ಸಿ. ಕಳಸದ (ಬಾಗಲಕೋಟೆ), ಗುಂಜನ್‌ ಕೃಷ್ಣ (ಕಲಬುರ್ಗಿ), ಮುನೀಶ್ ಮೌದ್ಗಿಲ್‌ (ಯಾದಗಿರಿ), ಡಾ. ವಿಶಾಲ್‌ ಆರ್‌. (ರಾಯಚೂರು), ಡಾ. ರಶ್ಮಿ ವಿ. ಮಹೇಶ್ (ಕೊಪ್ಪಳ), ಡಾ.ಎಂ.ಎನ್‌. ಅಜಯ್‌ ನಾಗಭೂಷಣ್‌ (ಬಳ್ಳಾರಿ), ರಿಚರ್ಡ್‌ ವಿನ್ಸೆಂಟ್‌ ಡಿಸೋಜ (ಬೀದರ್‌), ಮನೋಜ್‌ ಜೈನ್‌ (ಹಾವೇರಿ) ಅವರನ್ನು ನೇಮಕ ಮಾಡಲಾಗಿದೆ.

Sampriya YK

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

57 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago