Categories: ಕರ್ನಾಟಕ

ಜಿ.ಟಿ.ದೇವೇಗೌಡ ಪಕ್ಷ ತೊರೆದರೆ ಹಾನಿ ಇಲ್ಲ: ಎಚ್‌.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ: ಜಾತ್ಯಾತೀತ ಜನತಾ ದಳದ ಅಡಿಪಾಯ ಗಟ್ಟಿಯಾಗಿದೆ. ಯಾರೇ ಬಂದರೂ, ಹೋದರೂ ಪಕ್ಷದ ಬೇರುಗಳು ಅಲುಗಾಡುವುದಿಲ್ಲ. ಶಾಸಕ ಜಿ.ಟಿ.ದೇವೇಗೌಡ ಅವರು ಪಕ್ಷ ತೊರೆಯುವುದು ಎಲ್ಲರಿಗೂ ಗೊತ್ತಿರುವ ಹಳೇ ಕಥೆ. ಇದರಿಂದ ಪಕ್ಷಕ್ಕೇನೂ ಹಾನಿಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತೊಮ್ಮೆ ಜಿ.ಟಿ.ದೇವೇಗೌಡರಿಗೆ ಕರೆ ಮಾಡಿ ಒಟ್ಟಾಗಿ ಕೆಲಸ ಮಾಡೋಣ ಬಾ ಎಂದು ಕರೆದರೂ, ಈಗಾಗಲೇ ನಿರ್ಧರಿಸಿರುವುದಾಗಿ ಹೇಳಿದರು. ಹೀಗಿರುವಾಗ ನಾವೇನು ಮಾಡಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಬಿಜೆಪಿ ಮತ್ತು ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರ ಮಾಡಿರುವ ನನಗೆ, ಕೆಟ್ಟ ಅನುಭವವಾಗಿದೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ರಾಜ್ಯದಾದ್ಯಂತ ಯುವಜನರನ್ನು ಒಳಗೊಂಡು ಪಕ್ಷವನ್ನು ಸಂಘಟಿಸಲು ಮುಂದಾಗಿದ್ದೇನೆ. ಕೆಲಸ ಮಾಡುವವರಿಗೆ ಶಕ್ತಿ ತುಂಬುವ ಕೆಲಸ ಮಾಡುವೆ ಎಂದರು.
ಬಸವರಾಜ ಬೊಮ್ಮಾಯಿ ಅವರು, ಮುಖ್ಯಮಂತ್ರಿಯಾದ ಬಳಿಕವೂ ನಾನು ಜನತಾ ಪರಿವಾರದವನು ಎಂದು ನೆನೆಪಿಸಿಕೊಂಡಿದ್ದಾರೆ. ಹಾಗಾಗಿಯೇ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದಾಗ, ಎಂದಿಗೂ ಜನತಾ ಪರಿವಾರದವನು ಎನ್ನಲಿಲ್ಲ. ಅವರ ಮೊದಲ ಅಜೆಂಡಾ ಜಾ.ದಳ ಮುಗಿಸುವುದೇ ಆಗಿತ್ತು ಎಂದರು.

Indresh KC

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

39 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

53 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago