Categories: ಕರ್ನಾಟಕ

ಜೀವಿಜಯ ಸಹಕಾರದಿಂದಲೇ ಪಕ್ಷ ಸಂಘಟನೆ: ಕೆ.ಎಂ.ಗಣೇಶ್ ಸ್ಪಷ್ಟನೆ

ಮಡಿಕೇರಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಕೊಡಗು-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕೆ ಹೊರತು ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾರೂ ಗೊಂದಲ ಸೃಷ್ಟಿಸಬಾರದು ಎಂದು ಜಾತ್ಯತೀತ ಜನತಾದಳದ ನೂತನ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ನನಗೆ ನೀಡಿದ್ದು, ಹಿರಿಯರ ಆಜ್ಞೆಯನ್ನು ಪಾಲಿಸುವುದು ನನ್ನ ಕರ್ತವ್ಯ. ವರಿಷ್ಠರ ಸೂಚನೆಯಂತೆ ನಾನು ಜಿಲ್ಲಾಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದೇನೆ. ಪಕ್ಷದಲ್ಲಿರುವ ಪ್ರತಿಯೊಬ್ಬರ ಸಲಹೆ ಸೂಚನೆಗಳನ್ನು ಪಡೆದೇ ಪಕ್ಷವನ್ನು ಬೆಳೆಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹಿರಿಯರು ಹಾಗೂ ಜೆಡಿಎಸ್ ನಾಯಕರಾದ ಬಿ.ಎ.ಜೀವಿಜಯ ಅವರು ತಮ್ಮ ಪುತ್ರನನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕೆಂದು ಬಯಸಿದ್ದರು. ಆದರೆ ವರಿಷ್ಠರು ಆ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ನನ್ನನ್ನು ಕೂಡ ತಮ್ಮ ಪುತ್ರನೆಂದು ಭಾವಿಸಿ ಪಕ್ಷ ಸಂಘಟನೆಗೆ ಅಗತ್ಯ ಸಹಕಾರ, ಸಲಹೆ, ಸೂಚನೆ ನೀಡಿ ಪ್ರೋತ್ಸಾಹಿಸಿ ಎಂದು ಗಣೇಶ್ ಮನವಿ ಮಾಡಿದ್ದಾರೆ.

Desk

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

13 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

27 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

40 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

57 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 hours ago