Categories: ಕರ್ನಾಟಕ

ಡಿಕೆಶಿಗೆ ಹೇಳಿಕೆ ನೀಡುವ ಚಟ: ಸಚಿವ ಆರ್‌ ಅಶೋಕ್‌

ಮಡಿಕೇರಿ : ಮುಖ್ಯಮಂತ್ರಿ ಬಿ ಯಸ್‌ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಯಾವುದೇ ವಿಡಿಯೊ ದಾಖಲೆಗಳಿದ್ದರೂ ಕೊಡಲಿ.

ಆ ಬಗ್ಗೆ ಸರ್ಕಾರ ತನಿಖೆ ನಡಸಲಿದೆ ಆಧರೆ ಅವರಿಗೆ ಇರುವುದು ಹೇಳಿಕೆ ನೀಡುವ ಚಟವಷ್ಟೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದರು. ಇಂದು ಪೊನ್ನಂಪೇಟೆ ನೂತನ ತಾಲ್ಲೂಕು ಉದ್ಘಾಟನಾ ಸಮಾರಂಬದಲ್ಲಿ ಬಾಗವಹಿಸಲು ಬಂದಿದ್ದಾಗ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂತೋಷ್ ಆತ್ಮಹತ್ಯೆ ಯತ್ನ ಸಂಪೂರ್ಣ ಅವರ ವೈಯಕ್ತಿಕ ವಿಚಾರವಾಗಿದ್ದು ಪಕ್ಷ ಅಥವಾ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ. ಡಿ.ಕೆ.ಶಿವಕುಮಾರ್ ಅಡಿಯೊ, ವಿಡಿಯೊ ಇದೆ ಎಂದು ಹೇಳಿಕೆ ನೀಡುವ ಮೂಲಕ ಪ್ರಕರಣಕ್ಕೆ ರಾಜಕೀಯ ಲೇಪ ಬಳಿಯುತಿದ್ದಾರೆ ಎಂದು ಆರೋಪಿಸಿದರು.

 ಬಿ.ಎಸ್. ಯಡಿಯೂರಪ್ಪ ಇನ್ನೂ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ. ಯಾವುದೇ ರೀತಿಯ ಭಿನ್ನಮತ ಪಕ್ಷದೊಳಗಿಲ್ಲ. ನಾನು ದೆಹಲಿಗೆ ಹೋಗಿದ್ದೆ. ಅಲ್ಲಿಯೂ ನಾಯಕತ್ವ ಬದಲಾವಣೆ ಕುರಿತು ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಪ್ರತಿಕ್ರಿಯಿಸಿದರು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ. ಶಂಕರ್, ಮುನಿರತ್ನ ಹಾಗೂ ಎಂ.ಟಿ.ನಾಗರಾಜ್ ಅವರಿಗೆ ಮಂತ್ರಿ ಸ್ಥಾನ ಸಿಗಲಿದೆ‌ ಎಂದು ಹೇಳಿದರು. 

ಸಚಿವ ನಾರಾಯಣಗೌಡ ಅವರು ಮಾತನಾಡಿ, ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ. ಔಷಧಿ ವ್ಯತಿರಿಕ್ತ ಪರಿಣಾಮ ಬೀರಿದ್ದರಿಂದ ಅಸ್ವಸ್ಥ ಗೊಂಡಿದ್ದರು. ಈಗ ಅವರು ಗುಣಮುಖರಾಗುತ್ತಿದ್ದಾರೆ ಎಂದರು.

Desk

Recent Posts

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

15 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

25 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago