ಕರ್ನಾಟಕ

ಡಿಸಿಎಂ ಹುದ್ದೆ ಸಿಗದಿದ್ದರೆ ಬಂಡಾಯ ; ಗೋವಿಂದ ಕಾರಜೋಳ ಮುನ್ಸೂಚನೆ ?

ಬೆಂಗಳೂರು, – ರಾಜ್ಯ ಸಚಿವ ಸಂಪುಟ ರಚನೆ ಆಗುವುದಕ್ಕೆ ಎಲ್ಲ ಮುಹೂರ್ತ ಕೂಡಿ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸೋಮವಾರ ಸಂಜೆಯ ವೇಳೆಗೆ ಯಾರು ಮೊದಲ ಹಂತದ ಸಂಪುಟ ರಚನೆಯಲ್ದಲಿ ಸ್ಥಾನ ಪಡೆದಿದ್ದಾರೆ ಎಂದು ಗೊತ್ತಾಗುತ್ತದೆ. ಈ ಬೆನ್ನಲ್ಲೇ ಸ್ಥಾನ ಸಿಗದಿದ್ದರೆ ಬಂಡಾಯ ಏಳುವ ಸೂಚನೆಯೂ ಕಂಡು ಬಂದಿದೆ.
ಸೌಮ್ಯ ಮತ್ತು ಸಾತ್ವಿಕ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಗೋವಿಂದ ಕಾರಜೋಳ ಅವರು ಡಿಸಿಎಂ ಸ್ಥಾನ ಸಿಗದಿದ್ದರೆ ಬಂಡೇಳಲಿದ್ದಾರೆ ಎಂದು ದಲಿತ ಶಾಸಕರೊಬ್ಬರು ತಿಳಿಸಿದ್ದಾರೆ.
ಈಗಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಸಚಿವ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ಸಚಿವನಾಗಲಾರೆ.ಅದು ನಮ್ಮ ಹಿರಿತನಕ್ಕೆ ಮಾಡಿದ ಮುಜುಗರ ಮತ್ತು ಅಪಮಾನ ಹೀಗಾಗಿ ಸಂಪುಟ ಸೇರಲಾರೆ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ.
ಮಂತ್ರಿಮಂಡಲ ರಚನೆಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ಹಿರಿಯ ನಾಯಕನನ್ನ ಬದಿಗೆ ಸರಿಸಿ ಕಿರಿಯರಿಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಮಣೆ ಹಾಕುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ದಲಿತ ಸಮುದಾಯದ ಶಾಸಕರುಗಳು ಅಭಿಪ್ರಾಯ ವ್ಯಕ್ತಪಡಿಸಿ, ಹಾಗೇನಾದರೂ ಡಿಸಿಎಂ ಹುದ್ದೆ ನೀಡದೆ ಕೇವಲ ಮಂತ್ರಿ ಸ್ಥಾನವನ್ನು ಕಾರಜೋಳ ಅವರಿಗೆ ನೀಡಿದರೆ, ಆತ್ಮಗೌರವ, ಸ್ವಾಭಿಮಾನ ರಕ್ಷಣೆಗೆ ಸಂಪುಟದಿಂದ ಕಾರಜೋಳ ದೂರ ಉಳಿಯುವುದು ಅನಿವಾರ್ಯ ಎಂದು ಈ ವರ್ಗದ ಶಾಸಕರು ಹೇಳಿಕೊಂಡಿದ್ದಾರೆ.
ತಮ್ಮನ್ನು ಉಪಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸದೆ ಸಚಿವ ಸ್ಥಾನ ನೀಡಲು ಮುಂದಾದರೆ ಅದನ್ನು ಯಾವುದೇ ಕಾರಣಕ್ಕೂ ವಹಿಸಿಕೊಳ್ಳುವುದಿಲ್ಲ. ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿ ಸಚಿವನಾಗಿ ಕೆಲಸ ಮಾಡಲು ನನ್ನ ಮನಸ್ಸು ಒಪ್ಪುವುದಿಲ್ಲ. ಉಪಮುಖ್ಯಮಂತ್ರಿ ಬದಲು ಸಚಿವ ಸ್ಥಾನ ನೀಡುವುದು ಆದರೆ ಅಂತಹ ಸಚಿವ ಸ್ಥಾನ ನನಗೆ ಬೇಡ, ಪಕ್ಷದ ಶಾಸಕರಾಗಿ ಮತ್ತು ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.ಸಚಿವ ಸ್ಥಾನವನ್ನು ನಿರಾಕರಿಸುವುದು ಎಂದರೆ ಪಕ್ಷ ಮತ್ತು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವಲ್ಲ, ಬದಲಾಗಿ ಹಿರಿತನವನ್ನು ಗಣನೆಗೆ ತೆಗೆದುಕೊಳ್ಳದಿರುವುದರಿಂದ ಬೇಸರದಿಂದ ಈ ರೀತಿಯ ನಿರ್ಧಾರವನ್ನು ಕಾರಜೋಳ ಕೈಗೊಳ್ಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಿದ ಸಂದರ್ಭದಲ್ಲಿ ನೂತನ ಉಪಮುಖ್ಯಮಂತ್ರಿಯಾಗಿ ಗೋವಿಂದ ಕಾರಜೋಳ,ಆರ್ ಅಶೋಕ, ಮತ್ತು ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಸಾಧ್ಯತೆಗಳಿವೆ ಎಂದು ಹೇಳಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಿರಿಯರನ್ನು ಸಂಪುಟದಿಂದ ಬದಿಗೆ ಸರಿಸಿ ಕಿರಿಯರಿಗೆ ಅವಕಾಶ ನೀಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ದಲಿತ ವರ್ಗದ ಶಾಸಕರು, ಗೋವಿಂದ ಕಾರಜೋಳ ಅವರನ್ನು ಭೇಟಿಮಾಡಿ, ಡಿಸಿಎಂ ಕೈತಪ್ಪಿದರೆ, ಸಚಿವ ಸ್ಥಾನ ಒಪ್ಪಿಕೊಳ್ಳಬೇಡಿ ಎಂದು ಒತ್ತಡ ಹೇರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರನ್ನು ಸಂಪರ್ಕಿಸಿದಾಗ ಅವರು, ಲಭ್ಯವಾಗಲಿಲ್ಲ.

Indresh KC

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago