ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಸಚಿವ ಅರವಿಂದ ಲಿಂಬಾವಳಿ

ಮಂಗಳೂರು : ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ ಮತ್ತು ಲಿಪಿ ತಜ್ಞರು ಸರ್ವಾನುಮತಿಯಿಂದ ರೂಪಿಸಿದ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯುನಿಕೋಡ್‌ ನಕಾಶೆಗೆ ಸೇರಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಲಿಪಿ ಪಟ್ಟಿಯನ್ನು ಪರಾಮರ್ಶಿಸಿ ಅನುಮೋದಿಸಲು ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥಾನಕ್ಕೆ ಕರ್ನಾಟಕ ಸರ್ಕಾರದಿಂದ ಕೋರಲಾಗಿತ್ತು. ಭಾಭಾ ಸಂಸ್ಥಾನವು ಇದಕ್ಕಾಗಿ ಭಾಷಾ ತಜ್ಞರ ಸಮಿತಿಯನ್ನು ರಚಿಸಿ, ಚರ್ಚಿಸಿ ಲಿಪಿ ಪಟ್ಟಿಯನ್ನು ಅನುಮೋದಿಸಿ, ಯುನಿಕೋಡ್‌ ಕನ್ಸಾರ್ಶಿಯಂಗೆ ಸಲ್ಲಿಸಲು ಶಿಫಾರಸು ಮಾಡಿತು. ಅದರಂತೆ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಅಕಾಡೆಮಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಅಲ್ಲದೆ ಯುನಿಕೋಡ್‌ ನಕಾಶೆಗೆ ಸೇರಿಸಲು ಅಗತ್ಯವಿರುವ ಇನ್ನಿತರೆ ತಾಂತ್ರಿಕ ಅಂಶಗಳ ಬಗ್ಗೆಯೂ ಗಮನ ಕೊಡುವಂತೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.ತುಳು ಲಿಪಿಯನ್ನು ಯುನಿಕೋಡ್‌ ನಕಾಶೆಗೆ ತಕ್ಕಂತೆ ರೂಪಿಸುವಲ್ಲಿ ಶ್ರಮವಹಿಸಿದ ಎಲ್ಲ ತಜ್ಞರಿಗೂ ಸಚಿವ ಅರವಿಂದ ಲಿಂಬಾವಳಿ ಅಭಿನಂದನೆ ಸಲ್ಲಿಸಿದ್ದಾರೆ.
ಡಿಜಿಟಲ್‌ ವೇದಿಕೆಗಳಲ್ಲಿ, ಮುದ್ರಿತ ಸಾಹಿತ್ಯದಲ್ಲಿ, ಪ್ರಚಾರ ಸಾಹಿತ್ಯದಲ್ಲಿ – ಹೀಗೆ ತುಳು ಲಿಪಿಯು ಹೆಚ್ಚು ಹೆಚ್ಚು ಬಳಕೆಗೆ ಬಂದರೆ ಲಿಪಿಯನ್ನು ರೂಪಿಸಿದ್ದಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದಿರುವ ಅವರು
ಕರ್ನಾಟಕದ ಇತಿಹಾಸದಲ್ಲಿ ಒಂಬತ್ತು ಶತಮಾನಗಳ ಅತಿದೀರ್ಘವಾದ ಆಡಳಿತವನ್ನು ನಡೆಸಿದ ಖ್ಯಾತಿಯನ್ನು ಹೊಂದಿದ ತುಳು ಸಂಸ್ಕೃತಿಯ ಪ್ರತೀಕವಾದ ತುಳು ಲಿಪಿಯು ಯುನಿಕೋಡ್‌ಗೆ ಸೇರುತ್ತಿರುವುದಕ್ಕೆ ಲಕ್ಷಾಂತರ ತುಳು ಭಾಷಿಗರು ತೋರಿದ ಸಂಭ್ರಮದಲ್ಲಿ ಭಾಗಿಯಾಗಲು ನನಗೂ ಹರ್ಷವಾಗುತ್ತಿದೆ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
ಕನ್ನಡ ನಾಡಿನ ಉಳಿದೆಲ್ಲ ಭಾಷೆಗಳಂತೆಯೇ ತುಳು ಭಾಷೆ, ಸಂಸ್ಕೃತಿಯ ಉಳಿವು, ಬೆಳವಣಿಗೆಗಾಗಿ ನಮ್ಮ ಸರ್ಕಾರದ ಪ್ರಯತ್ನವು ನಿರಂತರವಾಗಿ ನಡೆಯುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

Indresh KC

Recent Posts

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

10 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

31 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

49 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

2 hours ago