Categories: ಕರ್ನಾಟಕ

ದೇವರ ದರ್ಶನಕ್ಕೂ ಟೋಕನ್ ವ್ಯವಸ್ಥೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು, ;ಕೊರೊನಾ ಸಾಂಕ್ರಾಮಿಕದ ನಡುವೆ ದೇವಾಲಯಗಳಲ್ಲಿ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯನ್ನು ನಿಯಂತ್ರಿಸಲು ಟೋಕನ್ ವ್ಯವಸ್ಥೆ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ದೇವಾಲಯಗಳಲ್ಲಿ ಕೋವಿಡ್-19 ಶಿಷ್ಟಾಚಾರ ವನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಂತಹ ವ್ಯವಸ್ಥೆಯನ್ನು ಪರಿಗಣಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಲಾಕ್‍ಡೌನ್ ಸಡಿಲಿಕೆ ಜಾರಿಯಾದಾಗಿನಿಂದಲೂ ದೇವಾಲಯಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಪ್ರಸಿದ್ಧ ದೇವಾಲಯಗಳಲ್ಲಿ ದಟ್ಟಣೆ ಸಾಮಾನ್ಯವಾಗಿ ಹೆಚ್ಚಾಗಿರುತ್ತದೆ. ಇದನ್ನು ನಿಯಂತ್ರಿಸಲು ನಿರ್ದಿಷ್ಟ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡುವುದು ಉತ್ತಮ ಎನ್ನಲಾಗಿದೆ. ಈ ಸಂಬಂಧ ರೂಪುರೇಷೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ರುವ ಸರ್ಕಾರ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆಯೂ ನಿರ್ದೇಶಿಸಿದೆ.ರಾಜ್ಯದಲ್ಲಿನ ಎ, ಬಿ ಮತ್ತು ಸಿ ವರ್ಗೀಕರಣದ ದೇವಾಲಯಗಳ ಬಗ್ಗೆ ವರದಿ ಕೇಳಿದ್ದು, ಆಸ್ತಿ ಬಗ್ಗೆ ಸಮೀಕ್ಷೆ ನಡೆಸಿ, ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಇಲಾಖೆ ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದೆ. ಅಲ್ಲದೆ ಭಕ್ತರಿಗೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

Indresh KC

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

21 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

43 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

48 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago