ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಸಂಜೆ ಪ್ರಕಟಿಸಿದ್ದು ಎಂದಿನಂತೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನ ಪಡೆದಿದೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿ ಬೆಂಗಳೂರು ದಕ್ಷಿಣವಿದ್ದು ಇಲ್ಲಿ 302 ವಿದ್ಯಾರ್ಥಿಗಳು 600 ಅಂಕಗಳನ್ನು ಪಡೆದಿದ್ದಾರೆ.
ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳು, ಉಡುಪಿಯ 149 ವಿದ್ಯಾರ್ಥಿಗಳು, ಹಾಸನದ 104 ವಿದ್ಯಾರ್ಥಿಗಳು 600 ಅಂಕಗಳನ್ನು ಪಡೆದಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಕೃಪಾಂಕ ಅನುಸರಿಸಿ ಫಲಿತಾಂಶವನ್ನು ನೀಡಲಾಗಿದೆ. ಇನ್ನು ಹೊಸ ವಿದ್ಯಾರ್ಥಿಗಳು ಹಾಗೂ ರಿಪಿಟರ್ಸ್ ಕೂಡ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ 6,66,497 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 3,35,138 ವಿದ್ಯಾರ್ಥಿಗಳು ಹಾಗೂ 3,31,359 ವಿದ್ಯಾರ್ಥಿನಿಯರಿದ್ದಾರೆ. ಇನ್ನು 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. 2,52,056 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ಪಡೆದಿದ್ದರೆ 1,47,055 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ದಕ್ಷಿಣ ಕನ್ನಡ ಮೊದಲು ; ಬಾಲಕರ ಮೇಲುಗೈ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.