News Karnataka Kannada
Tuesday, April 30 2024
ಕರ್ನಾಟಕ

ನಾಳೆಯಿಂದ ಸಿಇಟಿ : ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ

Cbsc
Photo Credit :

 

ಬೆಂಗಳೂರು, ;ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ರಹದಾರಿಯಾಗಿರುವ ಸಿಇಟಿ ಪರೀಕ್ಷೆ ನಾಳೆ ನಡೆಯಲಿದೆ. ಕೊರೊನಾ ಸೋಂಕಿನ ಮಧ್ಯೆ ನಡೆಯುತ್ತಿರುವ ಪರೀಕ್ಷೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು 530 ಕೇಂದ್ರಗಳಲ್ಲಿ ಸಿಇಟಿ ಪ್ರವೇಶ ಪರೀಕ್ಷೆ ನಡೆಸಲು ಅಗತ್ಯ ಮುನ್ನೆಚ್ಚೆರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ವಚ್ಛತೆ, ಸ್ಯಾನಿಟೈಸರ್ ಮತ್ತು ಮಾಸ್ಕ್‌ಗಳನ್ನು ಧರಿಸಿಕೊಂಡು ಬರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ನಾಳೆ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಆ. 29 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಹೊರ ರಾಜ್ಯ ಮತ್ತು ಗಡಿ ಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ಆ. 30 ರಂದು ನಡೆಯಲಿದೆ. 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳನ್ನು ಬೆಂಗಳೂರಿನಲ್ಲೇ ಸ್ಥಾಪಿಸಲಾಗಿದ್ದು, ಉಳಿದ 444 ಪರೀಕ್ಷಾ ಕೇಂದ್ರಗಳನ್ನು ರಾಜ್ಯದ ಇತರ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ.
ಪರೀಕ್ಷೆ ನಡೆಯುವ ದಿನಗಳಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದ್ದು, 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕ ಹಾಗೂ 21,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಗಡಿನಾಡು ಮತ್ತು ಒಳರಾಜ್ಯಗಳ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಆ. 30 ರಂದು ನಡೆಯಲಿದೆ. ಈ ಕೇಂದ್ರಗಳಲ್ಲಿ 1682 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು