News Karnataka Kannada
Saturday, May 04 2024
ಕರ್ನಾಟಕ

ನಾಳೆಯಿಂದ 1ರಿಂದ 5ನೇ ತರಗತಿ ಪ್ರಾರಂಭ: ಮುನ್ನೆಚ್ಚರಿಕೆ ವಹಿಸುವಂತೆ ಸಚಿವರ ಸೂಚನೆ

School Children
Photo Credit :

ನಾಳೆಯಿಂದ 1 ರಿಂದ 5ನೇ ತರಗತಿಗಳು ಆರಂಭವಾಗುತ್ತಿದೆ. ಕಳೆದೊಂದುವರೆ ವರ್ಷದ ಬಳಿಕ ಶಾಲೆಗೆ ಮಕ್ಕಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದ್ದಾರೆ.

ಕೋವಿಡ್ ಪ್ರಮಾಣ ತಗ್ಗಿದರೂ ಮೈಮರೆಯುವಂತಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

  • ಶಾಲಾ ಕೊಠಡಿಗಳು, ಪೀಠೋಪಕರಣಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿರಬೇಕು. ಕೊಠಡಿಯಲ್ಲಿ ದೈಹಿಕ ಅಂತರ ಕಾಪಾಡುವ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು. ಶೌಚಾಲಯದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಶಾಲಾ ಮುಖ್ಯಸ್ಥರು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
  • ಶಿಕ್ಷಣ ಇಲಾಖೆಯ ಗೈಡ್ ಲೈನ್ಸ್ ಪಾಲನೆ ಮಾಡಬೇಕು. ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಶಾಲೆಗೆ ಆಗಮಿಸುವ ಮಕ್ಕಳಿಂದ ಪೋಷಕರ ಅನುಮತಿ ಪತ್ರವನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ಶಾಲಾ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ.
  • ಶಾಲೆಗೆ ಮಕ್ಕಳನ್ನು ಕಳುಹಿಸುವ ಪೋಷಕರು ಅನುಮತಿ ಪತ್ರವನ್ನು ಕಡ್ಡಾಯವಾಗಿ ಕಳುಹಿಸಿ ಕೊಡಬೇಕು. ಶಾಲೆಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವುದರಿಂದ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ನೆಗಡಿ, ಕೆಮ್ಮು ಲಕ್ಷಣಗಳಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ. ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯ ಬೇಡ, ಆದರೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪೋಷಕರಿಗೆ ಮನವಿ ಮಾಡಿದ್ದಾರೆ.

ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿರುವುದರಿಂದ ಜಿಲ್ಲಾಧಿಕಾರಿ, ತಹಸೀಲ್ದಾರ್, ಡಿಡಿಪಿಐ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು