Categories: ಕರ್ನಾಟಕ

ನಿದ್ದೆಯಲ್ಲೂ ಕುರ್ಚಿಗಾಗಿ ಚಡಪಡಿಕೆ: ಮಡಿಕೇರಿಯಲ್ಲಿ ಸಚಿವ ಈಶ್ವರಪ್ಪ ಟೀಕೆ

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರುಗಳು ಕುರ್ಚಿ ಕಳೆದುಕೊಂಡು ನಿದ್ದೆಯಲ್ಲೂ ಕುರ್ಚಿಗಾಗಿ ಚಡಪಡಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ಸರಕಾರದ ವಿರುದ್ದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.

ರಾಜ್ಯ ಬಿಜೆಪಿ ಸರಕಾರದ ಆಡಳಿತದಲ್ಲಿ ಕೇಂದ್ರ ಸರಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಕುರಿತು ಅವರು ಸ್ಪಷ್ಟಪಡಿಸಿದರು.

ಮಡಿಕೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ, ಬಿಜೆಪಿಯ ಎಲ್ಲಾ ಸಚಿವರು ತಮ್ಮ ಹುದ್ದೆಯನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿದ್ದಾರೆ, ನಮ್ಮ ಹಿಂದೆ ಜನರು ಮಾತ್ರವೇ ಇದ್ದಾರೆ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರುಗಳು ಖುರ್ಚಿ ಕಳೆದುಕೊಂಡ ಹಿನ್ನೆಲೆಯಲ್ಲಿ ಅವರಿಗೆ ನಿದ್ದೆ ಬರುತ್ತಿಲ್ಲ. ಅದಕ್ಕಾಗಿ ಇಂತಹ ಆಪಾದನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರಕಾರ ಸರಿಯಾಗಿ ಅಧಿಕಾರ ನಡೆಸಿಲ್ಲ ಎನ್ನುವ ಕಾರಣಕ್ಕಾಗಿ ಆ ಪಕ್ಷಗಳ ಶಾಸಕರು ರಾಜೀನಾಮೆ ನೀಡಿದ್ದಾರೆ. ಅದರಿಂದಾಗಿ ನಮಗೆ ಬಹುಮತ ಬಂದಿದೆ, ಇಲ್ಲದಿದ್ದಲ್ಲಿ ನಾವ್ಯಾರು ಮಂತ್ರಿಗಳಾಗುತ್ತಿರಲಿಲ್ಲ. ಸಂಕಷ್ಟದಲ್ಲಿ ಆ ಶಾಸಕರು ಸಹಕಾರ ನೀಡಿದ್ದಾರೆ, ಅವರಿಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಅವರಿಗೆ ತೃಪ್ತಿಯಾಗುವ ರೀತಿಯಲ್ಲಿ ಸಹಕಾರ ನೀಡಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ವರ್ಚಸ್ಸು ಕಡಿಮೆಯಾಗುತ್ತಿದೆ ಎನ್ನುವ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಕಾಂಗ್ರೆಸ್‍ನಲ್ಲಿ ರಾಹುಲ್ ಗಾಂಧಿ ಅವರನ್ನು ಬಿಟ್ಟರೆ ಸಿದ್ದರಾಮಯ್ಯ ಅವರೇ ರಾಷ್ತ್ರೀಯ ಅಧ್ಯಕ್ಷರಾ?. ಹಾಗಿದ್ದರೆ ಅವರೇ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಪ್ರಚಾರಕ್ಕೆ ಹೋಗಬೇಕಿತ್ತು. ಕಾಂಗ್ರೆಸ್‍ಗೆ ಒಂದು ಸಮರ್ಥ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲು ಆಗದ ಇವರಿಗೆಲ್ಲ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಯಾವ ಯೋಗ್ಯತೆ, ಅಧಿಕಾರವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭಾಧ್ಯಕ್ಷರಿಗೇ ಏಕ ವಚನದಲ್ಲಿ ಮಾತನಾಡುತ್ತಾರೆ, ಆ ಪೀಠದ ಬಗ್ಗೆ ಅಗೌರವ ತೋರಿಸಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಅವರು ಹೇಗೆಲ್ಲಾ ಮಾತನಾಡುತ್ತಾರೆ. ಇವರಿಗೆ ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆಯಾ ಎನ್ನುವ ಪ್ರಶ್ನೆಗಳು ಎಲ್ಲರಿಗೂ ಮೂಡುತ್ತದೆ ಎಂದು ಟೀಕಿಸಿದರು.

Desk

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

7 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

8 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

8 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

8 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

9 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

9 hours ago