ಕಾಸರಗೋಡು: ಕೇರಳದಲ್ಲಿ ಮಾರಕ ನಿಫಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ನಿಫಾ ಸೋಂಕು ಪತ್ತೆಯಾಗಿಲ್ಲ. ಆದರೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ.
ಕಾಸರಗೋಡು ಜನರಲ್ ಆಸ್ಪತ್ರೆ ಮತ್ತು ಕಾಞ೦ಗಾಡ್ ನಲ್ಲಿರುವಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ನಿಗಾ ವಾರ್ಡ್ ಗಳನ್ನು ತೆರೆಯಲು ತೀರ್ಮಾನಿಸಿದೆ.
ಕೆಮ್ಮು, ತೀವ್ರ ಜ್ವರ, ಶ್ವಾಸ ಸಂಬಂಧಿ ಕಾಯಿಲೆ ಮೊದಲಾದವುಗಳು ಪತ್ತೆಯಾದಲ್ಲಿ ಕೂಡಲೇ ತಿಳಿಸುವಂತೆ ಖಾಸಗಿ ಆಸ್ಪತ್ರೆಗಳಿಗೆ ಸಂದೇಶ ರವಾನಿಸಲಾಗಿದೆ.
ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಸಿಬಂದಿಗಳ ರಜೆಗೆ ಕಡಿವಾಣ ಹಾಕಲಾಗಿದೆ.