“ನೂರು ದಿನಗಳಲ್ಲಿ ಉತ್ತಮ ಆಡಳಿತ ನೀಡಿರುವುದು ನನಗೆ ತೃಪ್ತಿ ತಂದಿದೆ” : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ನೂರು ದಿನಗಳಲ್ಲಿ ಬಂದತಹ ಸವಾಲುಗಳುನ್ನು ಸರಿಯಾದ ನಿರ್ಣಯಗಳಿಂದ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾದ ಆಡಳಿತ ನೀಡಿರುವುದು ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದೇ ರೀತಿ ಮುಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಮನೆಯ ಬಾಗಿಲಿಗೆ ಸರ್ಕಾರವೆನ್ನುವ ಅಂಶವನ್ನಿಟ್ಟುಕೊಂಡು ಯೋಜನೆಗಳನ್ನು ರೂಪಿಸುವ ಗುರಿ ಇದೆ ಎಂದರು.

ನೂರು ದಿನಗಳಲ್ಲಿ ಸರ್ಕಾರ ಭದ್ರ ಮತ್ತು ಭರವಸೆ ಹೆಜ್ಜೆಯಿಟ್ಟಿದ್ದು, ಮುಂದಿನ ದಿನಗಳಲ್ಲಿ ಜನಪರವಾದಂತಹ ದಿಕ್ಕಿನಲ್ಲಿ ಸಾಗಲು ಅನುಕೂಲವಾಗಿದೆ. ನೂರು ದಿನದಲ್ಲಿ ಅಮೃತ ಯೋಜನೆ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಬಡವರಿಗೆ ಸಂದ್ಯಾ ಸುರಕ್ಷಾ, ಅಂಗವಿಕಲರಿಗೆ ಮತ್ತು ವೃದ್ಧಾಪ್ಯರಿಗೆ ಮಾಶಾಸನ ಹೆಚ್ಚಿಸಲಾಗಿದೆ ಎಂದರು.

ಈಗ ತಾನೇ ಆರ್ಥಿಕ ಸುಧಾರಣೆಯಾಗುತ್ತಿದೆ. ಇದನ್ನು ನೋಡಿಕೊಂಡು ವಿಶೇಷವಾದ ಯೋಜನೆಗಳ ಮೂಲಕ ಬರುವಂತಹ ದಿನಗಳಲ್ಲಿ ಜನಸಾಮಾನ್ಯರ ಹತ್ತಿರ ಸರ್ಕಾರ ಹೋಗುವಂತಾಗಬೇಕು. ಆರ್ಥಿಕತೆಯಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಹೆಣ್ಣುಮಕ್ಕಳ ಸೇರಿದಂತೆ ಮಾನವಸಂಪನ್ಮೂಲ ತೊಡಗಿಕೊಳ್ಳುವಂತಹ ಉತ್ತಮ ಕಾರ್ಯಕ್ರಮ ತರುವ ಉದ್ದೇಶವಿದೆ ಎಂದು ತಿಳಿಸಿದರು.

ಜನಸೇವಕ ಯೋಜನೆಯನ್ನು ಜನವರಿ 26 ರಿಂದ ರಾಜ್ಯಾದ್ಯಂತ ಜಾರಿಗೆಗೊಳಿಸಲಾಗುವುದು. ಇದು ಉತ್ತಮವಾದ ಯೋಜನೆಯಾಗಿದೆ ಎಂದರು.

Sneha Gowda

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

26 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

31 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

43 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

50 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

53 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

1 hour ago