Categories: ಕರ್ನಾಟಕ

ಪಕ್ಷ ತೊರೆದವರಿಗೆ ಮತ್ತೆ ಬಾಗಿಲು ತೆರೆಯಲ್ಲ ; ಸಿದ್ದರಾಮಯ್ಯ

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿದ್ದಂತೆ ಪ್ರಮುಖ ಪ್ರತಿಪಕ್ಷವಾದ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿಯೂ ಭಿನ್ನಮತ ಮುಂದುವರಿದಿದೆ. ಒಂದಷ್ಟು ದಿನ ‘ಮುಂದಿನ ಮುಖ್ಯಮಂತ್ರಿ’ ವಿಚಾರವಾಗಿ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಗಳು ನಡೆದವು. ಅದಾದ ಬಳಿಕ ಈಗ ಘರ್ ವಾಪಸಿ ಬಗ್ಗೆ ಚರ್ಚೆ ಬಿಸಿಯೇರಿದೆ. ಮುಖ್ಯವಾಗಿ ರಾಜ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಿನ್ನ ನಿಲುವುಗಳನ್ನು ತಳೆದಿದ್ದಾರೆ.
ಪಕ್ಷ ಬಿಟ್ಟು ಹೋದವರ ಘರ್ ವಾಪಸಾತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ಪಕ್ಷ ಬಿಟ್ಟು ಹೋದ ಶಾಸಕರನ್ನ ವಾಪಸ್ ಸೇರಿಸಿಕೊಳ್ಳೋ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಕಡ್ಡಿಮುರಿದಂಗೆ ಹೇಳಿದ್ದಾರೆ.
ಅವರನ್ನು (17 ಶಾಸಕರನ್ನು) ಪಕ್ಷಕ್ಕೆ ಸೇರಿಸಿಕೊಳ್ಳೋದಿಲ್ಲ ಅಂತಾ ಸದನದಲ್ಲೂ ಹೇಳಿದ್ದೇನೆ. ಬಿಜೆಪಿಗೆ ಹೋದವರನ್ನ ಮತ್ತೆ ಸೇರಿಸಿಕೊಳ್ಳಲ್ಲ ಅನ್ನೋ ಹೇಳಿಕೆಗೆ ಈಗಲೂ ಬದ್ಧ ಎಂದು ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಷ್ಟಕ್ಕೂ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸೇರಿದ್ದ ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದೇನೆಂದ್ರೆ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ಸೇರಿದ್ದವರನ್ನು ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುತ್ತೇವೆ ಅಂದಿದ್ದರು.
ಆಪರೇಷನ್ ಕಮಲದಲ್ಲಿ ಪಕ್ಷ ತೊರದವರಿಗೆ ಅವಕಾಶ ಇದೆ. ಬಾಂಬೆ ಫ್ರೆಂಡ್ಸ್‌ ಮತ್ತೆ ಕಾಂಗ್ರೆಸ್ ಸೇರಲು ಅವಕಾಶ ಇದೆ. ಕಾಂಗ್ರೆಸ್‌ಗೆ ಮತ್ತೆ ಸೇರಲು ಅರ್ಜಿ ಹಾಕಿದರೆ ಪರಿಶೀಲಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದರು. ರಾಜಕೀಯದಲ್ಲಿ ಒಂದೇ ನಿಲುವು ತಾಳಲು ಸಾಧ್ಯವೇ ಇಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಬದಲಿಸಬೇಕಾಗುತ್ತದೆ. ಅರ್ಜಿ ಹಾಕಿದ್ದಲ್ಲಿ ವಾಪಸ್ ಕರೆಸಿಕೊಳ್ಳುವ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಪಕ್ಷ ತ್ಯಜಿಸಿ ಸರ್ಕಾರದಲ್ಲಿ ಮಂತ್ರಿಯಾದವರಿಗೆ ಡಿ.ಕೆ.ಶಿವಕುಮಾರ್ ಸಂದೇಶ ರವಾನಿಸಿದ್ದರು.

Indresh KC

Recent Posts

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

3 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

18 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

26 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

40 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

40 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

1 hour ago