ಕರ್ನಾಟಕ

ಪಕ್ಷ ತೊರೆಯುವ ಆಲೋಚನೆಯೇ ಇಲ್ಲ ಎಂದ ಸಚಿವ ಗೋಪಾಲಯ್ಯ

ಬೆಂಗಳೂರು, ; -ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ನೀಡುವ ಸೂಚನೆಯಂತೆ ನಾನು ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಉದ್ದೇಶವನ್ನಿಟ್ಟುಕೊಂಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದರು. ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಮತ್ತು ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಕಾರ್ಯಕರ್ತರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಬೇಕೆಂದು ಸೂಚನೆ ಕೊಟ್ಟಿದ್ದಾರೆ. ನಾನು ಇದನ್ನು ಚಾಚುತಪ್ಪದೇ ಮಾಡುತ್ತೇನೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಇದ್ದಾಗ ಪ್ರತಿ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪಕ್ಷದ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸುತ್ತೇನೆ. ಸ್ಥಳದಲ್ಲೇ ಪರಿಹಾರ ಒದಗಿಸುವ ಸಾಧ್ಯತೆ ಇದ್ದರೆ ಅಲ್ಲಿಯೇ ಖುದ್ದು ಬಗೆಹರಿಸುತ್ತೇನೆ. ಒಂದು ವೇಳೆ ಅಧಿಕಾರಿಗಳಿಗೆ ಹೇಳುವುದಿದ್ದರೆ ಅದಕ್ಕೂ ಸಿದ್ದ ಎಂದರು.
ಪ್ರತಿ ಗುರುವಾರ ವಿಧಾನಸೌಧದಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನಮ್ಮನ್ನು ಬಂದು ಭೇಟಿಯಾಗಬಹುದು. ಜಿಲ್ಲಾ ಪ್ರವಾಸದ ಸಂದರ್ಭದಲ್ಲೂ ಸ್ಥಳೀಯ ಕಾರ್ಯಕರ್ತರನ್ನು ಭೇಟಿ ಮಾಡಬಹುದು. ನಾವು ಬಿಡುವಿನ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಚೇರಿಗೆ ಸಂಘ ಪರಿವಾರದ ನಾಯಕರ ಮನೆಗಳಿಗೆ ಭೇಟಿ ಕೊಡುತ್ತೇನೆ ಎಂದು ಹೇಳಿದರು. ಸಾರ್ವಜನಿಕರು , ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಬೇಕೆಂದು ಪಕ್ಷ ಸೂಚನೆ ಕೊಟ್ಟಿದೆ. ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕೆಂದು ಪಕ್ಷದಿಂದ ಸೂಚನೆ ಬಂದಿದೆ. ಇದನ್ನು ಚಾಚುತಪ್ಪದೇ ಮಾಡುತ್ತೇನೆ ಎಂದು ವಿವರಣೆ ನೀಡಿದರು.
ನಾನು ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದುಬಂದಿದ್ದೇನೆ. ಪಕ್ಷವು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ನನಗೆ ಯಾವುದೇ ರೀತಿ ಅಸಮಾಧಾನವಿಲ್ಲ. ಅಬಕಾರಿ ಖಾತೆ ಸೇರಿದಂತೆ ಯಾವುದೇ ಖಾತೆಯನ್ನು ಕೊಟ್ಟರೂ ಅದನ್ನು ನಿಭಾಯಿಸುವೆ. ನನಗೆ ಖಾತೆಯ ಬಗ್ಗೆ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಬಿಜೆಪಿಯಲ್ಲಿ ಅತ್ಯಂತ ಸಂತೃಪ್ತಿಯಿಂದ ಇದ್ದೇನೆ. ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ. ಅತಿ ಹೆಚ್ಚು ಮತಗಳಿಂದ ಗೆದ್ದು ಮತ್ತೆ ಬರುತ್ತೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಪೂರ್ಣಾವಧಿ ಮುಗಿಸಲಿದೆ. ಇದಕ್ಕೆ ಯಾವುದೇ ಅನುಮಾನ ಬೇಡ ಎಂದರು.

Indresh KC

Recent Posts

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

18 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

39 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

52 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago