ಕರ್ನಾಟಕ

ಪತ್ರಿಕಾ ದಿನಾಚರಣೆ ಅಂಗವಾಗಿ ಮ್ಯೋಗ್ಲಿಂಗ್ ಅವರಿಗೆ ಗೌರವ ಅರ್ಪಣೆ

ಮಂಗಳೂರು  ; ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ “ಮಂಗಳೂರ ಸಮಾಚಾರ “ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಹಾಗೂ ಮ್ಯೋಗ್ಲಿಂಗ್ ಅವರಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿಯವರು ಮ್ಯೋಗ್ಲಿಂಗ್ ಪ್ರತಿಮೆಗೆ ಮಾಲಾರ್ಪಣೆಗೈದು ಮಾತನಾಡಿ, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 4ನೇ ಅಂಗವಾಗಿರುವ ಪತ್ರಿಕೋದ್ಯಮ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದ ಒಳಿತು ಕೆಡುಕುಗಳನ್ನು ಎತ್ತಿ ಹಿಡಿದು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾದ್ದು , ಕನ್ನಡದ ಮೊದಲ ಪತ್ರಿಕೆ ಮಂಗಳೂರಿನಲ್ಲಿ ಆರಂಭಗೊಂಡಿರುವುದು ನಮಗೆ ಹೆಮ್ಮೆಯ ವಿಚಾರ, ಈ ಪತ್ರಿಕೆಯನ್ನು ಹುಟ್ಟು ಹಾಕಿದ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್ ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ. ಹೆಚ್. ಎಂ. ವಾಟ್ಸ್‌ನ್‌ರವರು ಮಾತನಾಡಿ, ಮ್ಯೋಗ್ಲಿಂಗ್ ಮತ್ತು ಕಿಟೆಲ್ ಅವರು ಕೇವಲ ಕ್ರೈಸ್ತ ಸಮುದಾಯದ ಆಸ್ತಿ ಮಾತ್ರವಲ್ಲ, ನಮ್ಮ ದೇಶದವರಲ್ಲದಿದ್ದರೂ ಕನ್ನಡ ಭಾಷೆಗೆ ಅವರ ಕೊಡುಗೆ ಅಪಾರ ಅವರ ಸಾಧನೆ ಜನತೆಗೆ ತಿಳಿಯಬೇಕು ಮಂಗಳೂರಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅವರ ಪ್ರತಿಮೆ ಅಥವಾ ಯಾವುದಾದರೂ ರಸ್ತೆಗೆ ಅವರ ಹೆಸರಿಡಬೇಕು ಎಂದು ಹೇಳಿದರು.
ಬಳಿಕ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಜಿಲ್ಲಾಧ್ಯಕ್ಷರಾದ ಹರೀಶ್ ಬಂಟ್ವಾಳ್ ಮಾತನಾಡಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನಿರಂತರವಾಗಿ ಮ್ಯೋಗ್ಲಿಂಗ್ ಅವರಿಗೆ ಗೌರವ ಸಲ್ಲಿಸುವ ಮೂಲಕ ಪತ್ರಿಕಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿದೆ ಎಂದರು .
ಇದೇ ವೇಳೆ ತುಳು ಅಕಾಡೆಮಿ ಮಾಜಿ ಸದಸ್ಯ ಬೆನೆಟ್ ಅಮನ್ನರವರು ಮಾತನಾಡಿ, ಹರ್ಮನ್ ಫ್ರೆಡ್ರಿಕ್ ಮೊಗ್ಲಿಂಗ್‌ರವರು ದಾಸ ಸಾಹಿತ್ಯಕ್ಕೆ ನೀಡಿದ ಕೊಡುಗೆ ಮತ್ತು ಕನ್ನಡ ಪತ್ರಿಕಾರಂಗಕ್ಕೆ ನೀಡಿದ ಕೊಡುಗೆಯ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಉಪಾಧ್ಯಕ್ಷರು ಲಕ್ಮಣ್ ಕುಂದರ್, ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ , ಸಂಘಟನಾ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ, ಜಿಲ್ಲಾ ಕಾರ್ಯದರ್ಶಿ ಈಶ್ವರ್ ವಾರಾಣಸಿ, ಕಾರ್ಯಕಾರಿ ಸಮಿತಿ ಸದಸ್ಯ ಹಮೀದ್ ವಿಟ್ಲ ಸೇರಿದಂತೆ ಯೂನಿಯನ್‌ನ ಸದಸ್ಯರು ಮತ್ತು ತಿಯೋಲಾಜಿಕಲ್ ಕಾಲೇಜು ಶಿಕ್ಷಕರು ಉಪಸ್ಥಿತರಿದ್ದರು.

Indresh KC

Recent Posts

ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

35 seconds ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

12 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago