ಕರ್ನಾಟಕ

ಪರಿಸರಸ್ನೇಹಿ ಗಣೇಶ ಹಬ್ಬ ಆಚರಣೆಗೆ ಮನವಿ

ಬೆಂಗಳೂರು: ಈ ಬಾರಿ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಮನವಿ ಮಾಡಿಕೊಂಡಿದೆ.

ಮಂಡಳಿಯು ಅರಿಸಿನ ಗಣೇಶ ನಿರ್ಮಾಣದ ಅಭಿಯಾನವನ್ನು ಈಗಾಗಲೇ ಪ್ರಾರಂಭಿಸಿದ್ದು, ಈ ಬಾರಿ 10 ಲಕ್ಷ ಅರಿಸಿನ ಗಣೇಶ ವಿಗ್ರಹಗಳ ನಿರ್ಮಾಣದ ಗುರಿ ಹಾಕಿಕೊಂಡಿದೆ. ಸೆ.8ರಿಂದ ಸೆ.10ರವರೆಗೆ ಅರಿಸಿನ ಗಣೇಶ ವಿಗ್ರಹಗಳ ಫೋಟೋಗಳನ್ನು ಮಂಡಳಿಯ ಸಾಮಾಜಿಕ ಜಾಲತಾಣಗಳ ಪುಟದಲ್ಲಿ ಅಪ್‌ಲೋಡ್ ಮಾಡಲು ಅವಕಾಶ ನೀಡಲಾಗಿದೆ. ಮೊಬೈಲ್ ಆ್ಯಪ್ ಮತ್ತು ಕ್ಯೂಆರ್‌ ಕೋಡ್ ಸ್ಕ್ಯಾನ್ ನೆರವಿನಿಂದ ಕೂಡ ಅಪ್‌ಲೋಡ್ ಮಾಡುವ ಅವಕಾಶ ಒದಗಿಸಲಾಗಿದೆ.

ಅರಿಸಿನ ಗಣೇಶ ವಿಗ್ರಹಗಳ ಆರಾಧನೆಯ ಮಹತ್ವದ ಬಗ್ಗೆ ವಿವಿಧ ಕ್ಷೇತ್ರಗಳ ಗಣ್ಯರಿಂದ ವಿಡಿಯೊ ಸಂದೇಶ ಹಾಗೂ ಅರಿಸಿನ ಗಣೇಶ ವಿಗ್ರಹಗಳ ನಿರ್ಮಾಣದ ವಿಧಾನ ತಿಳಿಸಿಕೊಡುವ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗುತ್ತಿದೆ.

‘ಸ್ವಚ್ಛ ಮತ್ತು ಸುರಕ್ಷಿತ ಗಣೇಶ ಹಬ್ಬ ಆಚರಣೆ ಆದ್ಯತೆಯಾಗಿದೆ. ಪರಿಸರಸ್ನೇಹಿ ಹಬ್ಬಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಅರಿಸಿನ ಗಣೇಶ ವಿಗ್ರಹ ತಯಾರಿಸಿ, ಆರಾಧಿಸಬೇಕು’ ಎಂದು ಮಂಡಳಿಯ ಕಾರ್ಯದರ್ಶಿ ಶ್ರೀನಿವಾಸಲು ಮನವಿ ಮಾಡಿಕೊಂಡಿದ್ದಾರೆ.

Sampriya YK

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

5 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

28 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

44 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago