Categories: ಕರ್ನಾಟಕ

ಪರಿಹಾರ ಕಾರ್ಯ ವಿಳಂಬ : 15 ದಿನಗಳ ಗಡುವು ನೀಡಿದ ಕೊಡಗು ಬಿಜೆಪಿ

ಮಡಿಕೇರಿ: ಕೊಡಗಿನ ಅತಿವೃಷ್ಟಿ ಹಾನಿ ಸಂತ್ರಸ್ತರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸಿರುವ ಕೇಂದ್ರ ಸರ್ಕಾರ ಈಗಾಗಲೇ 546 ಕೊಟಿ ರೂ.ಗಳನ್ನು ಬಿಡುಗಡೆ ಮಾಡಿದೆ, ಆದರೆ ರಾಜ್ಯ ಸರ್ಕಾರದ ಪಾತ್ರ ಕ್ಷೀಣಿಸಿದೆ ಎಂದು ಆರೋಪಿಸಿರುವ ಜಿಲ್ಲಾ ಬಿಜೆಪಿ, ಮುಂದಿನ 15 ದಿನಗಳ ಒಳಗೆ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸದಿದ್ದಲ್ಲಿ ಪಕ್ಷದ ವತಿಯಿಂದ ಬೃಹತ್ ಜನಾಂದೋಲನ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಜನರು ಮತ್ತು ಸರ್ಕಾರದ ಸಂಪÀÇರ್ಣ ಸಹಕಾರವಿದ್ದರು ಜಿಲ್ಲಾಡಳಿತ ನಿದ್ರಾವಸ್ಥೆಯಲ್ಲಿದೆ ಎಂದು ಟೀಕಿಸಿದರು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಭಾರತೀಶ್, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಜವಾಬ್ದಾರಿಯಿಂದ ನುಣುಚಿ ಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವೆÀ ನಿರ್ಮಲ ಸೀತಾರಾಮನ್ ಅವರು ಇಲ್ಲಿಯ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಕೇಂದ್ರ ತಂಡವನ್ನು ಕಳುಹಿಸುವ ಮೂಲಕ ವರದಿಯನ್ನು ಪಡೆದು 546 ಕೋಟಿ ರೂ. ಪರಿಹಾರ ಬಿಡುಗಡೆಯಾಗುವಂತೆ ನೋಡಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ಕೇವಲ ಭರವಸೆಯನ್ನಷ್ಟೆ ನೀಡಿ ಸುಮ್ಮನಾಗಿದೆ. ಪ್ರಾಧಿಕಾರ ರಚನೆಯ ಬೇಡಿಕೆ ಇನ್ನೂ ಕೂಡ ಈಡೇರಿಲ್ಲ. ಜಿಲ್ಲಾಡಳಿತದಿಂದ ಸಮರ್ಪಕ ರೀತಿಯಲ್ಲಿ ಪರಿಹಾರ ಕಾರ್ಯವನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎನ್ನುವ ಕಾರಣಕ್ಕಾಗಿ ಪ್ರಾಧಿಕಾರ ರಚನೆಯ ಬೇಡಿಕೆಯನ್ನು ಇಡಲಾಗಿತ್ತು. ಆದರೆ ಸರ್ಕಾರ ಈ ಬಗ್ಗೆಯೂ ನಿರ್ಲಕ್ಷ್ಯ ತೋರಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಪ್ರತ್ಯೇಕ ಇಲಾಖೆಗಳಿವೆಯೇ ಎಂದು ಅಸಮಾಧಾನ ವ್ಯಕ್ತಪಡಿಸಿದ ಭಾರತೀಶ್ ಸಂಬಂಧಿಸಿದ ಇಲಾಖೆಗಳು ಪುನರ್ವಸತಿಗಾಗಿ ಜಾಗ ಗುರುತಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.

ಸಂತ್ರಸ್ತರು ಪ್ರತಿಭಟನೆಯ ಹಂತಕ್ಕೆ ಬಂದು ತಲುಪಿದ್ದರು ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದ ಅವರು, ದಾನಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೋಟಿ ಕೋಟಿ ಹಣವನ್ನು ನೀಡಿದ್ದು, ಈ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕೆಂದು ಒತ್ತಾಯಿಸಿದರು. ಪರಿಹಾರ ಕಾರ್ಯದ ಸಂದರ್ಭ ಹಲವರ ಹೆಸರನ್ನು ಬಿಡಲಾಗಿದ್ದು, ಸಂತ್ರಸ್ತರು ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳೇ ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಸ್ಥಳದಲ್ಲೆ ಪರಿಹಾರ ನೀಡಬೇಕೆಂದು ಭಾರತೀಶ್ ಒತ್ತಾಯಿಸಿದರು. ಅನೇಕ ದಾನಿಗಳು ಮನೆ ಮತ್ತು ಶಾಲೆಗಳನ್ನು ನಿರ್ಮಿಸಿಕೊಡಲು ಮುಂದೆ ಬಂದಿದ್ದರು ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಿಲ್ಲ ಎಂದು ಟೀಕಿಸಿದರು.

Desk

Recent Posts

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

4 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

7 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

30 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

52 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

57 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago