News Karnataka Kannada
Friday, May 10 2024
ಕರ್ನಾಟಕ

ಪಾಲಿಕೆ ಚುನಾವಣಾ ಮತ ಎಣಿಕೆ: ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಮೇಲುಗೈ

Vote Counting 06092021
Photo Credit :

ಬೆಂಗಳೂರು: 3 ನಗರಗಳ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬೆಳಗಾವಿಯಲ್ಲಿ ಪಕ್ಷೇತರರು ಮತ್ತು ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯ ಒಟ್ಟು 58 ಕ್ಷೇತ್ರಗಳ ಪೈಕಿ 12 ವಾರ್ಡುಗಳಲ್ಲಿ ಬಿಜೆಪಿ, 7 ವಾರ್ಡುಗಳಲ್ಲಿ ಕಾಂಗ್ರೆಸ್ ಹಾಗೂ 18 ವಾರ್ಡುಗಳಲ್ಲಿ ಪಕ್ಷೇತರರು ಮುನ್ನಡೆ ಸಾಧಿಸಿದ್ದಾರೆ. 18 ನೇ ವಾರ್ಡ್‌ ನ ಬಿಜೆಪಿಯ ರಾಹುಲ್ ಬಡಸಕರ ಮುನ್ಮಡೆ ಸಾಧಿಸಿಕೊಂಡಿದ್ದಾರೆ.

15ನೇ ವಾರ್ಡ್ ನಲ್ಲಿ ಬಿಜೆಪಿಯ ನೇತ್ರಾವತಿ ವಿನೋದ ಭಾಗವತ್, ವಾರ್ಡ್ ನಂಬರ್ 14 ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯ ಶಿವಾಜಿ ಮಂಡೋಳಕರ್ ಮತ್ತು ವಾರ್ಡ್ ನಂಬರ್ 40ರಲ್ಲಿ ಬಿಜೆಪಿಯ ಹೇಮಾ ಕಾಮ್ಕರ್ ಗೆಲುವು ಸಾಧಿಸಿದ್ದಾರೆ. ವಾರ್ಡ್ ನಂಬರ್ 18ರಲ್ಲಿ ಎಐಎಂಐಎಂ ಅಭ್ಯರ್ಥಿ ಶಾಹಿಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ನಂಬರ್ 11 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಮಿವುಲ್ಲಾ ಮಾಡೆವಾಲೆ ಗೆಲುವು ಸಾಧಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಮೇಲುಗೈ: ಇತ್ತ ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಒಟ್ಟು 82 ವಾರ್ಡ್ ಗಳ ಪೈಕಿ 21ರಲ್ಲಿ ಬಿಜೆಪಿ, 10ರಲ್ಲಿ ಕಾಂಗ್ರೆಸ್, ಒಂದರಲ್ಲಿ ಇತರರು ಮುನ್ನಡೆ ಸಾಧಿಸಿದ್ದಾರೆ. ಈ ಪೈಕಿ 42 ನೇ ವಾರ್ಡ್​ನಿಂದ ಸ್ಪರ್ಧಿಸಿದ ಮಹಾದೇವಪ್ಪ ನರಗುಂದ ಅವರು ಗೆಲುವಿನ ನಗೆ ಬೀರಿದ್ದಾರೆ.

ಕಲಬುರಗಿಯ 5 ವಾರ್ಡ್ ಗಳಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ 3ರಲ್ಲಿ ಬಿಜೆಪಿ, 1ರಲ್ಲಿ ಕಾಂಗ್ರೆಸ್ ಮತ್ತು 1ರಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಕಲಬುರಗಿಯ ವಾರ್ಡ್ ನಂಬರ್ 1 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಥಲಿ ಬೇಗಂ ಜಯ ಗಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು