Categories: ಕರ್ನಾಟಕ

ಪೋಲೀಸ್‌ ಅಧಿಕಾರಿಗಳ ಕಾರ್ಯ ವೈಖರಿಗೆ ಬೊಮ್ಮಾಯಿ ತರಾಟೆ

ಬೆಂಗಳೂರು, ; ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಮೈಸೂರು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಸುದ್ದಿಯಾಗುತ್ತಿದ್ದು, ತಪ್ಪಿತಸ್ಥ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್, ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳ ಕಾರ್ಯ ವೈಖರಿಗೆ ಸಿಎಂ ತರಾಟೆ ತೆಗೆದುಕೊಂಡಿದ್ದಾರೆ.

ದೆಹಲಿ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಹಿಂತಿರುಗುತ್ತಿದ್ದಂತೆಯೇ ಪ್ರಕರಣದ ಬಗ್ಗೆ ಪ್ರವೀಣ್‍ಸೂದ್ ಅವರಿಂದ ಮಾಹಿತಿ ಪಡೆದ ಸಿಎಂ ಅವರು ಆರೋಪಿಗಳ ಸುಳಿವು ಪತ್ತೆಯಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದು ಈಗಾಗಲೇ ನಾಲ್ಕು ದಿನಗಳಾಗಿವೆ. ಕರ್ನಾಟಕದ ಮಾನ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗುತ್ತಿದೆ. ಈವರೆಗೂ ನಿಮಗೆ ಒಂದು ಸಣ್ಣ ಸುಳಿವು ಸಿಕ್ಕಿಲ್ಲ ಎಂದರೆ ಇದೇನ ಕಾರ್ಯವೈಖರಿ ಎಂದು ಪ್ರಶ್ನಿಸಿದ್ದಾರೆಂದು ತಿಳಿದುಬಂದಿದೆ.
ಈ ಘಟನೆ ಬಗ್ಗೆ ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯ ಮತ್ತು ಕೇಂದ್ರ ಗೃಹ ಸಚಿವರ ಕಾರ್ಯಾಲಯವು ನನಗೆ ದೂರವಾಣಿ ಕರೆ ಮಾಡಿ ಮಾಹಿತಿ ಕೋರಿದೆ. ನಿಮ್ಮ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡುವಲ್ಲೇ ವಿಳಂಬ ಮಾಡುತ್ತಿದ್ದಾರೆ ಎಂದರೆ ನಾನು ಏನು ಉತ್ತರ ಕೊಡಬೇಕೆಂದು ಬೊಮ್ಮಾಯಿ ಅವರು ಡಿಜಿಪಿ ಮೇಲೆ ಕಿಡಿಕಾರಿದ್ದಾರೆ.

 

Indresh KC

Recent Posts

ಡಾಲಿ ನಟನೆಯ‘ಕೋಟಿ’ ಸಿನಿಮಾ ಮೊದಲ ಹಾಡು ಬಿಡುಗಡೆ

ಡಾಲಿ ಧನಂಜಯ್‌ ನಟಿಸಿರುವ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ…

10 mins ago

ನಾಮಪತ್ರ ಸಲ್ಲಿಸಲು ‘ಚಟ್ಟ’ದಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ

ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ…

39 mins ago

ಶಿಕ್ಷಕರಿಗೆ 15 ದಿನಗಳ ರಜೆ ಕಡಿತ : ಎಸ್‌ಎಸ್‌ಎಲ್‌ಸಿ ವಿಶೇಷ ತರಗತಿ ನಡೆಸಲು ಸೂಚನೆ

ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…

47 mins ago

ಈ ಜಿಲ್ಲೆಗಳಲ್ಲಿ ಧಾರಕಾರ ಮಳೆ : ಸಿಡಿಲು ಬಡಿದು ಯುವಕ ಸಾವು

ನೆನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿದು ಭೂಮಿಯನ್ನುವರುಣ ತಂಪಾಗಿಸಿದ್ದಾನೆ  ಆದರೆ ಕೆಲವಡೆ ಅವಾಂತರಗಳಾಗಿವೆ.ಕೃಷ್ಣನ ನಾಡು ಉಡುಪಿಯಲ್ಲೂ ಮಂಗಳವಾರ…

58 mins ago

ಇದು ಮಾವು ಸೀಜನ್‌: ತಾಜಾ ಮಾವಿನ ರಸ ಕುಡಿಯುವುದರಿಂದ ಏನೆಲ್ಲ ಪ್ರಯೋಜನ?

ಈಗ ಮಾವು ಸೀಜನ್‌. ಯಾವ ಹಣ್ಣಿನ ಅಂಗಡಿ ನೋಡಿದರಲ್ಲಿ ಮಾವಿನ ರಾಶಿ ಕಂಡುಬರುತ್ತದೆ. ಆದರೆ ಈಗ ಕೆಲವೊಂದು ಮಾವು ಅಪಾಯಕಾರಿ…

1 hour ago

ರಾಶಿ ಭವಿಷ್ಯ : ಯಾರಿಗೆ ಲಾಭ? ಯಾರಿಗೆ ನಷ್ಟ?

ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 15…

2 hours ago