ಕರ್ನಾಟಕ

ಪ್ರವಾಸಿಗರ ಚಿನ್ನಾಭರಣ ಕಳ್ಳಿಯ ಬಂಧನ

ಬೆಂಗಳೂರು ;ಕುಕ್ಕೆ ಸುಬ್ರಮಣ್ಯಕ್ಕೆ ಪ್ರವಾಸಿಗರ ಸೋಗಿನಲ್ಲಿ ಹೋಗಿ ಅಲ್ಲಿಗೆ ಬಂದಿದ್ದ ಪ್ರವಾಸಿಗರ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಖತರ್ನಾಕ್ ಮಹಿಳೆಯನ್ನು ಬಂಧಿಸಿರುವ ಯಶವಂತಪುರ ಪೊಲೀಸರು ೨೦.೨ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಬಂಧಿತ ಮಹಿಳೆಯು ನಗರದ ಚಿನ್ನಾಭರಣ ಅಂಗಡಿಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ೨೦.೨ ಲಕ್ಷ ಮೌಲ್ಯದ ೪೩೯ ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಆತನ ಸ್ನೇಹಿತನಿಗಾಗಿ ಶೋಧ ನಡೆಸಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.
ಕಳೆದ ೨೫ ರಂದು ಬೆಳಿಗ್ಗೆ ೧೦ರ ವೇಳೆ ಯಶವಂತಪುರ ಎಸ್‌ಕೆ ಜ್ಯುವೆಲರಿ ಬಳಿ ಬಂಧಿತ ಮಹಿಳೆಯು ವ್ಯಕ್ತಿ ಯೊಬ್ಬನ ಜತೆ ಶಂಕಾಸ್ಪದವಾಗಿ ಓಡಾಡುತ್ತಿದ್ದಾಗ ಅಪರಾಧ ಸಿಬ್ಬಂದಿ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಹೋದಾಗ ವ್ಯಕ್ತಿಯು ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಮಹಿಳೆಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆಂಧ್ರ ಮೂಲದ ಆಕೆಯ ಬಳಿ ನಗರದ ವಿವಿಧ ಚಿನ್ನದಂಗಡಿಗಳಲ್ಲಿ ಅಡಮಾನವಿಟ್ಟಿರುವ ೧೦ ರಸೀದಿಗಳು, ೪ ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಕೂಡಲೇ ಆಕೆಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆಕೆಯ ಪತಿ ೨ ವರ್ಷಗಳ ಹಿಂದೆ ಮೃತಪಟ್ಟಿರುವುದು ಪತ್ತೆಯಾಗಿದೆ. ಆಕೆಯೂ ಪರಾರಿಯಾಗಿರುವ ಯುವಕನ ಜತೆ ೨ನೇ ಮದುವೆಯಾಗಿ ಆತನೊಂದಿಗೆ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯಕ್ಕೆ ಹೋಗಿ ದೇವರ ದರ್ಶನ ಮಾಡಲು ಹೋಗಿದ್ದಾಗ ಕುಕ್ಕೆ ಸುಬ್ರಮಣ್ಯದ ಹೋಟೆಲ್‌ವೊಂದರಲ್ಲಿ ಪ್ರವಾಸಿಗರೊಬ್ಬರು ಟೇಬಲ್ ಮೇಲೆ ಇಟ್ಟಿದ್ದ ಬ್ಯಾಗ್‌ನ್ನು ದೋಚಿ ನಗರಕ್ಕೆ ವಾಪಸ್ಸಾಗಿ ಅವುಗಳನ್ನು ಮಾರಾಟ ಮಾಡಿದ್ದನ್ನು ಬಾಯ್ಬಿಟ್ಟಿದ್ದಾಳೆ. ಆರೋಪಿಯು ಮದುವೆಯಾಗಿರುವುದಾಗಿ ಹಏಳಿದ ಯುವಕನ ಜತೆ ಲಗ್ಗೆರೆಯಲ್ಲಿ ರೂಂ ಒಂದನ್ನು ಬಾಡಿಗೆಗೆ ಪಡೆದು ವಾಸಿಸುತ್ತಿದ್ದು, ಯಶವಂತಪುರ ಇನ್ಸ್‌ಪೆಕ್ಟರ್ ಸುರೇಶ್ ಮತ್ತವರ ಸಿಬ್ಬಂದಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.

Indresh KC

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

7 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

19 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

24 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

38 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 hour ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago