Categories: ಕರ್ನಾಟಕ

ಬಂಟ್ವಾಳ: ಕ್ರೈಸ್ತ ದೇವರ ಮೂರ್ತಿಗೆ ಹಾನಿ ಮಾಡಿದ ದುಷ್ಕರ್ಮಿಗಳು

ಬಂಟ್ವಾಳ: ಮನೇಲ ಕ್ರಿಸ್ತರಾಜ ದೇವಾಲಯಕ್ಕೆ ಸೇರಿದ ಕ್ರೈಸ್ತ ದೇವರ ಮೂರ್ತಿಯ ಗ್ರೋಟ್ಟೊವನ್ನು ದುಷ್ಕರ್ಮಿಗಳು ಹಾನಿಗೊಳಿಸಿದ ಘಟನೆ ವಿಟ್ಲ ಸಮೀಪದ  ಪುಣಚ- ತೋರಣಕಟ್ಟೆ ಎಂಬಲ್ಲಿ ಶನಿವಾರ ನಡೆದಿದೆ.

ಇಲ್ಲಿನ ತೋರಣಕಟ್ಟೆ ರಸ್ತೆಯಲ್ಲಿರುವ ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದು, ಗ್ರೋಟ್ಟೊವಿನ ಹೊರಗಿನ ಗಾಜು ಪುಡಿಯಾಗಿದೆ. 

ಇಂದು ಬೆಳಗ್ಗೆ ೧೦.೩೦ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಟ್ಲ ಠಾಣಾಧಿಕಾರಿ ಯಲ್ಲಪ್ಪ ಅವರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧರ್ಮಗುರು ಆಗ್ರಹಿಸಿದ್ದಾರೆ. ಈ ಸಂಬಂಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago